ಜ್ಯೋತಿ ಶಾಲೆಯ ವಾರ್ಷಿಕೋತ್ಸವ

KannadaprabhaNewsNetwork |  
Published : Feb 05, 2026, 02:00 AM IST
4ಎಚ್ಎಸ್ಎನ್11 :  | Kannada Prabha

ಸಾರಾಂಶ

ಮ್ಯಾನೇಜ್‌ಮೆಂಟ್ ಸರ್ವಿಸಸ್ ವತಿಯಿಂದ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಜೆಇಎಂಎಸ್ ಸೆಲೆಸ್ಟಿಯಾ ೨೦೨೫-೨೬ ಅನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಹಾಗೂ ಆಡಳಿತ ಮಂಡಳಿಯ ಸದಸ್ಯರ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಶಾಲೆಯ ಶೈಕ್ಷಣಿಕ ಹಾಗೂ ಸಹಪಾಠ್ಯ ಚಟುವಟಿಕೆಗಳ ವಾರ್ಷಿಕ ವರದಿಯನ್ನು ಮಂಡಿಸಿ ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆಯಿತು. ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಶಾಲೆ ಮತ್ತು ಎನ್‌ಎಡ್ಜ್ ಮ್ಯಾನೇಜ್‌ಮೆಂಟ್ ಸರ್ವಿಸಸ್ ನೀಡುತ್ತಿರುವ ಸಹಕಾರಕ್ಕೆ ಪಾಲಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣಮ್ಯಾನೇಜ್‌ಮೆಂಟ್ ಸರ್ವಿಸಸ್ ವತಿಯಿಂದ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಜೆಇಎಂಎಸ್ ಸೆಲೆಸ್ಟಿಯಾ ೨೦೨೫-೨೬ ಅನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಹಾಗೂ ಆಡಳಿತ ಮಂಡಳಿಯ ಸದಸ್ಯರ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.ಕಾರ್ಯಕ್ರಮವನ್ನು ಶಾಸಕ ಸಿ. ಎನ್. ಬಾಲಕೃಷ್ಣ ಉದ್ಘಾಟಿಸಿ ಶಾಲೆಯ ಶೈಕ್ಷಣಿಕ ಸಾಧನೆ, ಶಿಸ್ತು ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಡಾ. ಚಿನ್ಮಯಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ದೀಪಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಶಾಲೆಯ ಅಧ್ಯಕ್ಷರಾದ ಪದ್ಮಮ್ಮ ಜಗನ್ನಾಥ್, ಕಾರ್ಯದರ್ಶಿ ಅಕ್ಷತಾ ಎಂ.ಜೆ., ಮ್ಯಾನೇಜಿಂಗ್ ಡೈರೆಕ್ಟರ್ ಡಿ. ಸಯ್ಯದ್ ತಬ್ರೇಜ್ ನದೀಮ್, ಹಾಗೂ ಅಕಾಡೆಮಿಕ್ ಡೈರೆಕ್ಟರ್ ಹುದಾ ಫಾತಿಮಾ ದೆಲ್ವಿ, ಅಶೋಕ್ ಆರ್. ಸುಮೈಯ ಬಿ ಜಿ, ಮುಖ್ಯಶಿಕ್ಷಕರು, ಸಂಯೋಜಕರು, ಶಾಲಾ ಶಿಕ್ಷಕರು, ಸೇರಿದಂತೆ ಹಲವರು ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯರಾದ ರಂಗನಾಥ್ ಬಿ.ಎಸ್. ಶಾಲೆಯ ಶೈಕ್ಷಣಿಕ ಹಾಗೂ ಸಹಪಾಠ್ಯ ಚಟುವಟಿಕೆಗಳ ವಾರ್ಷಿಕ ವರದಿಯನ್ನು ಮಂಡಿಸಿ ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆಯಿತು. ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಶಾಲೆ ಮತ್ತು ಎನ್‌ಎಡ್ಜ್ ಮ್ಯಾನೇಜ್‌ಮೆಂಟ್ ಸರ್ವಿಸಸ್ ನೀಡುತ್ತಿರುವ ಸಹಕಾರಕ್ಕೆ ಪಾಲಕರು ಮೆಚ್ಚುಗೆ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾವೂರು ಶ್ರೀ ಗೋಪಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಸಂಪನ್ನ
ಸಚಿವ ತಿಮ್ಮಾಪುರ ಬೆಂಬಲಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ