ಕನ್ನಡಪ್ರಭ ವಾರ್ತೆ ಹಿರಿಯೂರು
ಸಭೆಯಲ್ಲಿ ವಿವಿಧ ರೈತರಿಂದ ಅಹವಾಲುಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಇಲಾಖೆಯಿಂದ ಪರಿಹಾರವನ್ನು ಸ್ಥಳದಲ್ಲಿಯೇ ಒದಗಿಸಲಾಯಿತು.
ಸಭೆಯಲ್ಲಿ ರೈತ ಮುಖಂಡ ಕೆಸಿ ಹೊರಕೇರಪ್ಪ ಮಾತನಾಡಿ, ಕೃಷಿ ಇಲಾಖೆಯಿಂದ ಉತ್ತಮ ಗುಣಮಟ್ಟವುಳ್ಳ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳನ್ನು ನೀಡಬೇಕು. ರಸಗೊಬ್ಬರ ಮಳಿಗೆಗಳಲ್ಲಿ ರಸಗೊಬ್ಬರ ದರಪಟ್ಟಿಯನ್ನು ಪ್ರದರ್ಶಿಸಲು ರಸಗೊಬ್ಬರ ಮಳಿಗೆ ಮಾಲೀಕರಿಗೆ ನಿರ್ದೇಶನ ನೀಡಬೇಕೆಂದು ತಿಳಿಸಿದರು.ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿ, ತೊಗರಿ ಮತ್ತು ಕಡಲೆ ಬಿತ್ತನೆ ಬೀಜ ಖರೀದಿ ಮಾಡಲು ಈಶ ರೈತ ಉತ್ಪಾದಕ ಸಂಸ್ಥೆಗೆ ಅನುಮತಿ ನೀಡಿರುವುದಕ್ಕೆ ನಮ್ಮ ವಿರೋಧವಿದೆ. ಕೂಡಲೇ ಸದರಿ ಅನುಮತಿಯನ್ನು ರದ್ದುಪಡಿಸಬೇಕೆಂದು ಮನವಿ ಮಾಡಿ ಸಭೆಯನ್ನು ಬಹಿಷ್ಕರಿಸಿ ಸಭೆಯಿಂದ ಹೊರನಡೆದರು.
ಉಪ ಕೃಷಿ ನಿರ್ದೇಶಕ ಉಮೇಶ್ ಮಾತನಾಡಿ ಈ ವರ್ಷದಲ್ಲಿ ರಸಗೊಬ್ಬರವನ್ನು ಎಫ್.ಎಫ್.ಎಸ್ ಮೊಬೈಲ್ ಆಪ್ ಮೂಲಕ ವಿತರಿಸಲಿದ್ದು ಇದಕ್ಕೆ ರೈತರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಪರಶುರಾಮ ಚಂದ್ರವಂಶಿ,ಕೃಷಿಕ ಸಮಾಜದ ನಿರ್ದೇಶಕ ಹೆಚ್.ಆರ್ ತಿಮ್ಮಯ್ಯ ಸೇರಿದಂತೆ ವಿವಿಧ ರೈತ ಮುಖಂಡರುಗಳು ಹಾಗೂ ವಿವಿಧ ಇಲಾಖೆಯ ಮುಖ್ಯಸ್ಥರುಗಳು ಹಾಜರಿದ್ದರು.