ಕೆ.ಎಂ.ದೊಡ್ಡಿ:
ಭಾರತೀ ಎಜುಕೇಷನ್ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಆಶಯ್ ಮಧು, ಬಡ ವಿದ್ಯಾರ್ಥಿಗಳಿಗೆ ನೆರವಿನ ಚೆಕ್‌ಗಳನ್ನು ವಿತರಿಸಿ ಮಾತನಾಡಿ, ಬಡವರು, ರೈತರು ಹಾಗೂ ಕಾರ್ಮಿಕರ ಮಕ್ಕಳಿಗೆ ಆರ್ಥಿಕ ನೆರವು ನೀಡುವ ಮೂಲಕ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಭಾರತೀ ಕಾಲೇಜು ಹಾಗೂ ಟ್ರಸ್ಟ್ ಬೆಂಬಲ ನೀಡುತ್ತಿದೆ ಎಂದರು.
ಆರ್ಥಿಕ ಸಂಕಷ್ಟದಿಂದಾಗಿ ಅನೇಕ ಬಡ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣ ಪೂರ್ಣಗೊಳಿಸುವುದೇ ಕಷ್ಟವಾಗುತ್ತಿದೆ. ಇದರಿಂದ ಅವರು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.ಈ ವಿದ್ಯಾರ್ಥಿಗಳಿಗೆ ನೆರವು ನೀಡುವುದು ಸಮಾಜದ ಜವಾಬ್ದಾರಿಯಾಗಿದೆ ಎಂದರು.ಶೈಕ್ಷಣಿಕ ನೆರವು ಪಡೆದ ವಿದ್ಯಾರ್ಥಿಗಳು ಈ ಹಣವನ್ನು ವಿದ್ಯಾಭ್ಯಾಸಕ್ಕೆ ಬಳಸಿಕೊಂಡು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ಆರೋಗ್ಯ ಕೇಂದ್ರದಲ್ಲಿ ಹಲವರಿಗೆ ಬೀಳ್ಕೊಡುಗೆ ಸಮಾರಂಭ
ಡಾ.ನಂದೀಶ್ ಇಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು, ಸಾರ್ವಜನಿಕರ ಜೊತೆ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದರು. ಸಿಬ್ಬಂದಿಯವರ ಜೊತೆ ಕೂಡ ಸಹೃದಯಿ ಆಗಿದ್ದರು. ಮದ್ದೂರು ತಾಲೂಕಿನ ವಳೆಗೆರೆದೊಡ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ ಹೊಂದಿರುವ ಅವರಿಗೆ ದೇವರು ಅವರಿಗೆ ಆಯಸ್ಸು ಆರೋಗ್ಯ ನೆಮ್ಮದಿ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸಿದರು.