ಕನ್ನಡಪ್ರಭ ವಾರ್ತೆ ಪಾಂಡವಪುರ
ಸಂಘದ 11 ಮಂದಿಯಲ್ಲಿ ಜೆಡಿಎಸ್-8 ಹಾಗೂ ರೈತಸಂಘ- ಕಾಂಗ್ರೆಸ್-3 ನಿರ್ದೇಶಕರಿದ್ದಾರೆ. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೆ.ಎನ್.ವಿವೇಕ್ ನಾರಾಯಣಗೌಡ, ಉಪಾಧ್ಯಕ್ಷ ಸ್ಥಾನಕ್ಕೆ ಕರೀಗೌಡ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಸಂತೋಷ್‌ಕುಮಾರ್ ಘೋಷಿಸಿದರು.
ನೂತನ ಅಧ್ಯಕ್ಷ- ಉಪಾಧ್ಯಕ್ಷರನ್ನು ಎಲ್ಲಾ ನಿರ್ದೇಕರು ಅಭಿನಂದಿಸಿದರು. ನಂತರ ಪಟಾಕಿ ಸಿಡಿಸಿ ಸಿಹಿಹಂಚಿ ಸಂಭ್ರಮಿಸಿದರು.ಅಧ್ಯಕ್ಷ ಕೆ.ಎನ್.ವಿವೇಕ್ ಮಾತನಾಡಿ, ಎಲ್ಲಾ ನಿರ್ದೇಶಕರು ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಆಶೀರ್ವಾದದಿಂದ ಅಧ್ಯಕ್ಷರಾಗಿದ್ದು, ಸಂಘದ ಅಭಿವೃದ್ಧಿಗೆ ಹಲವು ಯೋಜನೆ ರೂಪಿಸಿಕೊಂಡು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಇಂದು ಉಚಿತ ಬೆಡ್‌ಶೀಟ್‌ಗಳ ವಿತರಣೆ
ಮಂಡ್ಯ:ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬದ ಪ್ರಯುಕ್ತ ಜೂನ್ 1ರಂದು ನಗರದ ಸೇವಾಕಿರಣ ವೃದ್ಧಾಶ್ರಮದಲ್ಲಿರುವ ವೃದ್ಧರಿಗೆ ಉಚಿತ ಬೆಡ್‌ಶೀಟ್‌ಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಾಂಗ್ರೆಸ್ ಉಸ್ತುವಾರಿ ಹಳುವಾಡಿ ವೆಂಕಟೇಶ್ ತಿಳಿಸಿದ್ದಾರೆ. ಸಮಾಜಮುಖಿ ಕಾರ್ಯಕ್ರಮದೊಂದಿಗೆ ಸಚಿವರ ಹುಟ್ಟುಹಬ್ಬವನ್ನು ಅರ್ಥಪೂರ್ಣಗೊಳಿಸಬೇಕೆಂಬ ಉದ್ದೇಶದಿಂದ ಬೆಡ್‌ಶೀಟ್ ವಿತರಣೆ ಮಾಡಲಾಗುತ್ತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.