ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಶಾಸಕ ಎಚ್.ಟಿ.ಮಂಜು ಅನುಪಸ್ಥಿತಿಯಲ್ಲಿ ಅವರ ಸಹೋದರ ಟಿಎಪಿಸಿಎಂಎಸ್ ನಿರ್ದೇಶಕ ಎಚ್.ಟಿ.ಲೋಕೇಶ್ ನೇತೃತ್ವದಲ್ಲಿ ಪಟ್ಟಣದ ಆಸ್ಪತ್ರೆಗೆ ಆಗಮಿಸಿದ ಜೆಡಿಎಸ್ ಕಾರ್ಯಕರ್ತರು ಒಳ ರೋಗಿಗಳಿಗೆ ಹಣ್ಣು ಹಂಪಲು ಹಂಚಿ ಎಚ್.ಡಿ.ಕುಮಾರಸ್ವಾಮಿ ಮತ್ತು ನಾಳೆ ಹುಟ್ಟು ಹಬ್ಬ ಆಚರಿಸಿಕೊಳ್ಳಲಿರುವ ಎಚ್.ಡಿ.ಕೆ ಸಹೋದರ ಎಚ್.ಡಿ.ರೇವಣ್ಣ ಅವರಿಗೆ ಹುಟ್ಟುಹಬ್ಬದ ಶುಭಕೋರಿ ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಈ ವೇಳೆ ಎಚ್.ಟಿ.ಲೋಕೇಶ್ ಮಾತನಾಡಿ, ಕೇಂದ್ರ ಸಚಿವರಾಗಿ ಕುಮಾರಸ್ವಾಮಿ ಅವರು ಇಡೀ ದೇಶವೇ ಮೆಚ್ಚುವಂತೆ ದಕ್ಷ ಪ್ರಾಮಾಣಿಕ ಆಡಳಿತ ನೀಡುತ್ತಿದ್ದಾರೆ. ಅವರು ನೂರು ಕಾಲ ಆರೋಗ್ಯವಂತರಾಗಿ ಜನರ ಸೇವೆ ಮಾಡಲಿ ಎಂದು ದೇವರು ಹಾಗೂ ತಾಯಿ ಚೌಡೇಶ್ವರಿ ದೇವಿ ಅನುಗ್ರಹಿಸಿ ಆಶೀರ್ವದಿಸಲಿ ಎಂದು ಪ್ರಾರ್ಥಿಸಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿರುವುದಾಗಿ ಹೇಳಿದರು.ಈ ವೇಳೆ ತಾಪಂ ಮಾಜಿ ಸದಸ್ಯರಾದ ಮಲ್ಲೇನಹಳ್ಳಿ ಮೋಹನ್, ಮೆಣಸ ಮಹದೇವೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಬಲದೇವ್, ಎಪಿಎಂಸಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ವಿ.ಎಸ್.ಧನಂಜಯ್ ಕುಮಾರ್, ಬೇಲದಕೆರೆ ನಂಜೇಗೌಡ, ತೋಟಪ್ಪಶೆಟ್ಟಿ, ಕೆ.ಆರ್.ಹೇಮಂತಕುಮಾರ್, ವಡ್ಡರಹಳ್ಳಿ ಮಹದೇವೇಗೌಡ, ದೊಡ್ಡಗಾಡಿಗನಹಳ್ಳಿ ಕುಮಾರ್, ವಕೀಲ ಕುರುಬಹಳ್ಳಿ ನಾಗೇಶ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಮಂಜುಳಾ ಸೇರಿದಂತೆ ನೂರಾರು ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು.