ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣ, ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ಆವರಣ, ಕೆ.ಪಿ.ಎಸ್ ಶಾಲೆ, ನಳಂದ ಶಾಲೆ, ಕಿಕ್ಕೇರಿಯ ಕೆ.ಪಿ.ಎಸ್ ಶಾಲೆ ಸೇರಿದಂತೆ ಬಹುತೇಕ ಶಾಲಾ ಕಾಲೇಜುಗಳಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.
ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಆವರಣ ಮತ್ತು ಆರ್‌ಟಿಒ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗಪಟು ಯೋಗಗುರು ಅಲ್ಲಮಪ್ರಭು ಅವರ ಮಾರ್ಗದರ್ಶನದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.ಪಟ್ಟಣದ ಜಯನಗರ ಬಡಾವಣೆಯ ಆರ್‌ಟಿಒ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ಆವರಣದಲ್ಲಿ ಪಟ್ಟಣದ ಬುದ್ಧ, ಬಸವ, ಅಂಬೇಡ್ಕರ್ ಯೋಗ ಕೇಂದ್ರದಿಂದ ಕಳೆದ 15 ದಿನಗಳಿಂದ ಉಚಿತವಾಗಿ ನಡೆಸಲ್ಪಡುತ್ತಿದ್ದ ಯೋಗ ಕಲಿಕಾ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ಈ ವೇಳೆ ಕಸಾಪ ಮಾಜಿ ಅಧ್ಯಕ್ಷರಾದ ಎಂ.ಕೆ.ಹರಿಚರಣ ತಿಲಕ್, ಕೆ.ಆರ್. ನೀಲಕಂಠ, ಕೆ.ಕಾಳೇಗೌಡ, ಬಳ್ಳೇಕೆರೆ ಮಂಜುನಾಥ್, ಶಿಕ್ಷಕ ರಂಗಸ್ವಾಮಿ ಮತ್ತಿತರರು ಇದ್ದರು.
ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ಜೆಎಂಎಫ್‌ಸಿ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಸುಧೀರ್ ಯೋಗ ದಿನವನ್ನು ಉದ್ಘಾಟಿಸಿ ಮಾತನಾಡಿ, ಆರೋಗ್ಯವಂತ ಜೀವನಕ್ಕೆ ಯೋಗವು ಸಂಜೀವಿನಿಯಾಗಿದೆ. ನಿಯಮಿತ ಆಹಾರ ಸೇವಿಸಿ ಶಿಸ್ತು ಬದ್ಧ ಜೀವನ ನಡೆಸಿ , ಯೋಗಾಭ್ಯಾಸವನ್ನು ನಿಮ್ಮ ಜೀವನದ ಒಂದು ಭಾಗವನ್ನಾಗಿಸಿಕೊಂಡು ನೆಮ್ಮದಿಯ ಜೀವನ ನಡೆಸಬೇಕು ಎಂದು ಕರೆ ನೀಡಿದರು.
ಈ ವೇಳೆ ಅಪರ ಸಿವಿಲ್ ನ್ಯಾಯಾಧಿಶರಾದ ಅರ್ಪಿತಾ, ಪಾರ್ವತಿ, ವಕೀಲರ ಸಂಘದ ಅಧ್ಯಕ್ಷ ಎಂ.ಆರ್.ನಾಗೇಗೌಡ, ಕಾರ್ಯದರ್ಶಿ ಸಾಧುಗೋನಹಳ್ಳಿ ಮಂಜೇಗೌಡ, ಹಿರಿಯ ವಕೀಲರಾದ ಜಿ.ಆರ್.ಅನಂತ ರಾಮಯ್ಯ ಸೇರಿದಂತೆ ತಾಲೂಕಿನ ವಕೀಲರು, ವಕೀಲರ ಸಂಘದ ಪದಾಧಿಕಾರಿಗಳು, ನ್ಯಾಯಾಲದ ಸಿಬ್ಬಂದಿಗಳು ವಿಶ್ವಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.