ಜನರ ಸಮಸ್ಯೆ ಆಲಿಸಿದ ಕೆ.ಎಸ್.ಬಸವಂತಪ್ಪ

KannadaprabhaNewsNetwork |  
Published : Sep 27, 2026, 01:45 AM IST
ಕ್ಯಾಪ್ಷನ26ಕೆಡಿವಿಜಿ 32, 33 ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾರಿಗನೂರು ಕ್ರಾಸ್‌ನಲ್ಲಿ ಸಚಿವ ಕೆ.ಎಸ್. ಬಸವಂತಪ್ಪ  ಜನರ ಸಮಸ್ಯೆಗಳನ್ನು ಆಲಿಸುವುದರ ಜತೆಗೆ ಸ್ಥಳೀಯ ಹೋಟೆಲ್‌ನಲ್ಲಿ ಮುಖಂಡರೊಂದಿಗೆ ಮಂಡಕ್ಕಿ, ಮೆಣಸಿನಕಾಯಿ ಸವಿದರು. | Kannada Prabha

ಸಾರಾಂಶ

ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾರಿಗನೂರು ಕ್ರಾಸ್‌ನಲ್ಲಿ ಶನಿವಾರ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಜನರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭ ಸ್ಥಳೀಯ ಹೋಟೆಲ್‌ನಲ್ಲಿ ಮುಖಂಡರೊಂದಿಗೆ ಮಂಡಕ್ಕಿ, ಮೆಣಸಿನಕಾಯಿ ಸವಿದರು. ಸಚಿವರ ಸರಳ ನಡೆ ಸ್ಥಳೀಯರ ಗಮನ ಸೆಳೆಯಿತು.

- ಕಾರಿಗನೂರು ಕ್ರಾಸ್‌ನ ಹೋಟೆಲ್‌ನಲ್ಲಿ ಮಂಡಕ್ಕಿ, ಮೆಣಸಿನಕಾಯಿ ಸವಿದ ಸಚಿವ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾರಿಗನೂರು ಕ್ರಾಸ್‌ನಲ್ಲಿ ಶನಿವಾರ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಜನರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭ ಸ್ಥಳೀಯ ಹೋಟೆಲ್‌ನಲ್ಲಿ ಮುಖಂಡರೊಂದಿಗೆ ಮಂಡಕ್ಕಿ, ಮೆಣಸಿನಕಾಯಿ ಸವಿದರು. ಸಚಿವರ ಸರಳ ನಡೆ ಸ್ಥಳೀಯರ ಗಮನ ಸೆಳೆಯಿತು.

ಕಳೆದ ಎರಡು ವಾರಗಳಿಂದ ರಾಜ್ಯ ಪ್ರವಾಸ ಹಾಗೂ ನಾಲ್ಕು ದಿನಗಳ ಬರಗಾಲ ಅಧಿವೇಶನದಲ್ಲಿ ಪಾಲ್ಗೊಂಡು ಕ್ಷೇತ್ರಕ್ಕೆ ಮರಳಿದ ಸಚಿವರು, ಶನಿವಾರ ಬೆಳಗ್ಗೆಯಿಂದಲೇ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಹೊನ್ನೂರು ಗ್ರಾಮದಲ್ಲಿ ಮೃತಪಟ್ಟ ಈರಪ್ಪ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಕಾರಿಗನೂರು ಗ್ರಾಮದಲ್ಲಿ ನಿಧನರಾದ ಕಾಂಗ್ರೆಸ್ ಮುಖಂಡ ನಾಗಣ್ಣ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.

ಅನಂತರ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳೀಯ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿ ಪರಿಹಾರ ಕಲ್ಪಿಸಲು ಕ್ರಮ ಕೈಗೊಂಡರು. ಇನ್ನು ಕೆಲವು ಸಮಸ್ಯೆಗಳನ್ನು ನಿಗದಿತ ಕಾಲಮಿತಿಯಲ್ಲಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತೇಜಸ್ವಿ ಪಟೇಲ್ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

- - -

-26ಕೆಡಿವಿಜಿ 32, 33:

ಕಾರಿಗನೂರು ಕ್ರಾಸ್‌ನಲ್ಲಿ ಸಚಿವ ಕೆ.ಎಸ್. ಬಸವಂತಪ್ಪ ಜನರ ಸಮಸ್ಯೆಗಳನ್ನು ಆಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉದ್ಯೋಗ ಸೃಷ್ಟಿಯಲ್ಲಿ ಎನ್‌ಡಿಎ ಸಂಪೂರ್ಣ ವಿಫಲ
ಇಎಸ್‌ಐ ಆಸ್ಪತ್ರೆಗೆ ಬಸವಂತಪ್ಪ ಭೇಟಿ: ಸ್ವಚ್ಛತೆ, ವೈದ್ಯಕೀಯ ಸೇವೆಗೆ ಮೆಚ್ಚುಗೆ