ಶತಾಯುಷಿ ಸಾಹಿತಿ ಅಮ್ಮೆಂಬಳರಿಗೆ ಕ.ಸಾ.ಪ. ಗೌರವ

KannadaprabhaNewsNetwork |  
Published : Nov 18, 2026, 02:30 AM IST
ಅಮ್ಮೆಂಬಳ ಆನಂದರಿಗೆ ಉಡುಪಿ ಕಸಾಪದ ಗೌರವ | Kannada Prabha

ಸಾರಾಂಶ

ಶತಾಯುಷಿ ಹಿರಿಯ ಸಾಹಿತಿ, ಪತ್ರಕರ್ತ ಅಮ್ಮೆಂಬಳ ಆನಂದ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ವತಿಯಿಂದ ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.

ಉಡುಪಿ : ಶತಾಯುಷಿ ಹಿರಿಯ ಸಾಹಿತಿ, ಪತ್ರಕರ್ತ ಅಮ್ಮೆಂಬಳ ಆನಂದ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ವತಿಯಿಂದ ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭ ಮಾತನಾಡಿದ ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ, ‘1926ರಲ್ಲಿ ಜನಿಸಿದ ಅಮ್ಮೆಂಬಳ ಆನಂದ ಅವರು ಕನ್ನಡ ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಚೇತನ. ಹಲವಾರು ಪತ್ರಿಕೆಗಳ ಸಂಪಾದಕರಾಗಿ ಕೆಲಸ ಮಾಡಿ, ಕನ್ನಡ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ತೋರಿಸಿದವರು. ಅವರ ಸಾಹಿತ್ಯ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ದಿನಕರ ದೇಸಾಯಿ ಪ್ರತಿಷ್ಠಾನದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದಾರೆ ಎಂದರು.ಸನ್ಮಾನ ಸ್ವೀಕರಿಸಿದ ಅಮ್ಮೆಂಬಳರು, ಕನ್ನಡದ ಉಳಿವು ಕೇವಲ ಭಾಷಣದಿಂದಲ್ಲ, ದೂಷಣೆಯಿಂದಲ್ಲ. ಪರಸ್ಪರ ಕೂತು ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ಸುಹಾಸಂ ಅಧ್ಯಕ್ಷೆ ಸಂಧ್ಯಾ ಶೆಣೈ, ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು, ರಂಜನಿ ವಸಂತ್, ಜಿಲ್ಲಾ ಸಾಹಿತ್ಯ ಪರಿಷತ್ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಸಾಂಸ್ಕೃತಿಕ ಕಾರ್ಯದರ್ಶಿ ವಸಂತ್, ರೇಡಿಯೋ ಮಣಿಪಾಲದ ಮುಖ್ಯಸ್ಥೆ ಡಾ. ರಶ್ಮಿ ಅಮ್ಮೆಂಬಳ, ದೀಪಾ ಕರ್ಕಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಿ
ವಿಶ್ವಮಟ್ಟದ ಶ್ರೇಷ್ಠ ವಾಸ್ತುಶಿಲ್ಪಗಳ ತಾಣ ವಿಜಯಪುರ