ಕಬಡ್ಡಿ: ಹೆಮ್ಮಾಡಿ ಜನತಾ ಪಿಯು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

KannadaprabhaNewsNetwork |  
Published : Sep 25, 2026, 02:45 AM IST
24ಹೆಮ್ಮಾಡಿ | Kannada Prabha

ಸಾರಾಂಶ

ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಇಲ್ಲಿನ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನ ಗೆದ್ದುಕೊಂಡಿದೆ.

ಹೆಮ್ಮಾಡಿ: ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಇಲ್ಲಿನ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನ ಗೆದ್ದುಕೊಂಡಿದೆ. ಈ ತಂಡದ ನವ್ಯ ಜೆ.ಎಲ್., ಮೋನಿಷಾ, ಸಿಂಚನ, ಸಿಂಚನಾ ಎಸ್. ಪೂಜಾರಿ, ಲಿಖಿತಾ, ನಾಗಶ್ರೀ ಅತ್ಯುತ್ತಮ ಕ್ರೀಡಾಸ್ಪೂರ್ತಿಯಿಂದ ಆಡಿ ತಂಡವನ್ನು ಗೆಲ್ಲಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಸಂಸ್ಥೆಯ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಗಳಿಸಿದೆ. ಈ ತಂಡದಲ್ಲಿ ಅತ್ಯುತ್ತಮ ಸಾಧನೆ ತೋರಿದ ಸರ್ವೇಶ್, ಪ್ರೀತಮ್, ಶ್ರೀಶಾಂತ್ ಅವರು ಕೂಡ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಗಾಗಲೇ ಉಡುಪಿ ಜಿಲ್ಲೆಯ ಪ್ರತಿಷ್ಠಿತ ವಿದ್ಯಾ ಸಂಸ್ಥೆಯು ವಿವಿಧ ಕ್ರೀಡಾ ಪಂದ್ಯಾಟದಲ್ಲಿ ರಾಜ್ಯ - ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದಿದೆ. ಇದೀಗ ಮತ್ತೆ ಶಿಕ್ಷಣದ ಜೊತೆಗೆ ಕ್ರೀಡಾ ಸಾಧನೆಯಿಂದ ಗಮನ ಸೆಳೆದಿದೆ. ಈ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.ಈ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಟರ್ ಮೆಟ್ರೋ ಯೋಜನೆಗೆ ವೇಗ: ೧೧ ನಿಲ್ದಾಣಗಳು ಅಂತಿಮ
ಕಿಲ್ಲೆ ಮೈದಾನ ಸಾರ್ವಜನಿಕ ಗಣೇಶೋತ್ಸವ ಶೋಭಾಯಾತ್ರೆ