ಕನ್ನಡಪ್ರಭ ವಾರ್ತೆ ಉಪ್ಪಿನಂಗಡಿ
ಪ್ರಕರಣದ ಆರೋಪಿ ಎಂಬಿಎ ವಿದ್ಯಾರ್ಥಿ ಅಭಿನ್ ಕೃತ್ಯ ಎಸಗಲೆಂದು ಭಾನುವಾರ ತನ್ನ ಹುಟ್ಟೂರಾದ ಕೇರಳದಿಂದ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದ. ಅಭಿನ್ ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕು ನಿವಾಸಿ. ಭಾನುವಾರ ಮಧ್ಯಾಹ್ನ ರೈಲಿನ ಮೂಲಕ ನೆಲಂಬೂರುನಿಂದ ಹೊರಟ ಆತ ರಾತ್ರಿ ವೇಳೆ ಮಂಗಳೂರು ರೈಲು ನಿಲ್ದಾಣ ತಲುಪಿದ್ದ. ಅಲ್ಲಿಯೇ ಬೆಳಿಗ್ಗೆಯವರೆಗೆ ಕಾಲ ಕಳೆದ ಆತ ಬಳಿಕ ಮಂಗಳೂರಿನಿಂದ ಬಸ್ಸು ಹಿಡಿದು ಕಡಬಕ್ಕೆ ಆಗಮಿಸಿದ್ದ ಎನ್ನಲಾಗಿದೆ.
ಅಬಿನ್ ಕಾಲೇಜ್ ಪ್ರವೇಶಿಸುವುದಕ್ಕೆ ಮುಂಚೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಸಮವಸ್ತ್ರವನ್ನು ಹೋಲುವ ಬಿಳಿ ಅಂಗಿ, ನೀಲಿ ಪ್ಯಾಂಟ್ ಧರಿಸಿಕೊಂಡು, ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದಾನೆ. ಈ ಬಟ್ಟೆಯನ್ನು ಆತ ಕಡಬದ ಯಾವುದೋ ಸ್ಥಳದಲ್ಲಿ ಧರಿಸಿದ್ದ. ಕಪ್ಪು ಪ್ಯಾಂಟ್ ಹಾಗೂ ಕಪ್ಪು ಅಂಗಿ ಧರಿಸಿಕೊಂಡು ಮಂಗಳೂರಿನಿಂದ ಬಂದಿದ್ದ ಆತ, ಕಡಬ ಪೇಟೆಯಲ್ಲಿರುವ ಬೇಕರಿಯೊಂದರಲ್ಲಿ ತನ್ನಲ್ಲಿದ್ದ ಎರಡು ಮೊಬೈಲ್ ಫೋನ್ ಗಳನ್ನು ಚಾರ್ಜ್ ಗಿಟ್ಟಿದ್ದ. ಈ ವೇಳೆಯೂ ಅತ ಕಪ್ಪು ಫ್ಯಾಂಟ್ ಹಾಗೂ ಕಪ್ಪು ಅಂಗಿ ಧರಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೇಕರಿಗೆ ಆತ ಬೆಳಗ್ಗಿನ ಜಾವ 8 ಗಂಟೆ ಸುಮಾರಿಗೆ ಬಂದಿದ್ದಾನೆ.ದುಷ್ಕೃತ್ಯ ಎಸಗಲು ಕೆಲ ಸಮಯದಿಂದ ಸಂಚು ರೂಪಿಸಿದ್ದ ದಾಳಿಕೋರನು, ಯೂನಿಫಾರ್ಮ್ ಹೋಲುವ ಬಣ್ಣದ ತನಗೊಪ್ಪುವ ಬಟ್ಟೆಯನ್ನು ಈ ಉದ್ದೇಶಕ್ಕಾಗಿಯೇ ಕೇರಳದಲ್ಲಿ ಹೊಲಿಸಿ ತಂದಿದ್ದ ಎನ್ನಲಾಗಿದೆ. ಸಂತ್ರಸ್ತ ವಿದ್ಯಾರ್ಥಿನಿ ಕಲಿಯುತ್ತಿದ್ದ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗ ಅಂತಿಮ ಪರೀಕ್ಷೆ ನಡೆಯುತ್ತಿದೆ. ಈ ಕಾಲೇಜು ಸೇರಿದಂತೆ ವಲಯದ ಮೂರು ಕಾಲೇಜಿನ ವಿದ್ಯಾರ್ಥಿಗಳು ಅದು ಪರೀಕ್ಷಾ ಕೇಂದ್ರವಾಗಿತ್ತು. ಹೀಗಾಗಿ ಪರೀಕ್ಷೆ ಸಮಯ ಈ ಕಾಲೇಜಿಗೆ ಉಳಿದ ಕಾಲೇಜ್ ವಿದ್ಯಾರ್ಥಿಗಳು ಬರುವ ಕಾರಣ ಪಕ್ಕನೇ ಇವನ ಬಗ್ಗೆ ಅನುಮಾನ ಉಂಟಾಗಲು ಸಾಧ್ಯವಿಲ್ಲ. ಹೀಗಾಗಿ ಯಾರಿಗೂ ಅನುಮಾನ ಬಾರದಂತೆ ಕೃತ್ಯ ಎಸಗಲು ಆತ ಎಕ್ಸಾಂ ದಿನವನ್ನೆ ಆಯ್ಕೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಒಳಗಡೆ ತೆರಳುವ ಕೊನೆಯ ಕ್ಷಣವನ್ನೆ ಕೃತ್ಯ ಎಸಗಲು ಬಳಸಿರುವುದರ ಹಿಂದೆಯೂ ತಂತ್ರಗಾರಿಕೆ ಇತ್ತು ಎನ್ನಲಾಗಿದೆ.
ಕಡಬದಲ್ಲಿ ಇದು ಎರಡನೇ ಕೃತ್ಯ
ಸದ್ರಿ ಪ್ರಕರಣದಲ್ಲಿ ಸಂತ್ರಸ್ತೆ ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಪಿ ಜಯಾನಂದ ಜೈಲು ಪಾಲಾಗಿದ್ದಾನೆ. ಆಸಿಡ್ ಪ್ರಕರಣದ ಬಗ್ಗೆ ಪ್ರಸಕ್ತ ಕಾನೂನು ಬಿಗುವಾಗಿದ್ದರಿಂದ ಆರೋಪಿಯ ಜಾಮೀನು ಬಿಡುಗಡೆಯ ಪ್ರಯತ್ನಗಳು ವಿಫಲವಾಗಿರುವುದಾಗಿ ತಿಳಿದು ಬಂದಿದೆ.