ಕನ್ನಡಪ್ರಭ ವಾರ್ತೆ ಮಂಡ್ಯ
ಕದಂಬ ಸೈನ್ಯ ಕನ್ನಡ ಸಂಘಟನೆಯಿಂದ ಕದಂಬ-ಚಾಲುಕ್ಯ-ರಾಷ್ಟ್ರಕೂಟ ಚಕ್ರವರ್ತಿಗಳ ಸ್ಮರಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಜು.೧೭ರ ಬೆಳಿಗ್ಗೆ ೧೧ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದರು.ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕನ್ನಡ ನಾಡು-ನುಡಿಗೆ ಹೋರಾಡಿದ ಮಹನೀಯರ ಪ್ರತಿಮೆಗಳು, ಪ್ರಮುಖ ರಸ್ತೆಗಳಿಗೆ ಅವರ ಹೆಸರನ್ನು ಇಡುವಲ್ಲಿ ಆಸಕ್ತಿ ತೋರದ ಸರ್ಕಾರಗಳು ರಾಜಕಾರಣಿಗಳ ಪ್ರತಿಮೆ ಹಾಗೂ ಹೆಸರನ್ನಿಡುವಲ್ಲಿ ತಲ್ಲೀನರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಮಲ್ಲಿಕಾರ್ಜುನ ಬಾಲದಂಡಿ ಉದ್ಘಾಟಿಸಲಿದ್ದು, ಸಂಘಟನೆಯ ಅಧ್ಯಕ್ಷ ಬೇಕ್ರಿ ರಮೇಶ್ ಅಧ್ಯಕ್ಷತೆ ವಹಿಸುವರು, ಮೈಸೂರು ವಿವಿಯ ಮಾಜಿ ಸೆನೆಟ್ ಸದಸ್ಯ ಈ.ಸಿ.ನಿಂಗರಾಜ್‌ಗೌಡ, ಸದ್ವಿದ್ಯಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಎಂ.ಕೆ.ಹರೀಶ್‌ಕುಮಾರ್, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.ಕದಂಬ ಚಾಲುಕ್ಯ ರಾಷ್ಟ್ರಕೂಟ ಪ್ರಶಸ್ತಿ ಪುರಸ್ಕೃತ ಡಾ.ಎನ್.ನರಸಿಂಹಮೂರ್ತಿ, ತಲಕಾಡು ಗಂಗ ಸಾಮ್ರಾಟ್ ಪ್ರಶಸ್ತಿ ಪುರಸ್ಕೃತ ವಿಶಾಲ್ ರಘು, ಕದಂಬ ರತ್ನ ಪ್ರಶಸ್ತಿ ಪುರಸ್ಕೃತ ಎಂ.ಜೆ.ಯೋಗೇಶ್, ಕದಂಬ ವೀರ ರಾಣಿ ಚೆನ್ನಭೈರಾದೇವಿ ಪ್ರಶಸ್ತಿ ಪುರಸಕ್ಕತ ಕೆ.ಟಿ.ಸೌಭಾಗ್ಯ, ಮಂಜುಳಾ ಅವರು ಉಪಸ್ಥಿತರಿರಲಿದ್ದು, ಮಾಂಡವ್ಯ ಶಿಕ್ಷಣ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಡಾ.ಮೀರಾ ಶಿವಲಿಂಗಯ್ಯ, ತಾಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಎಎಸ್‌ಪಿಗಳಾದ ಎಸ್.ಈ.ಗಂಗಾಧರಸ್ವಾಮಿ, ಸಿ.ಈ.ತಿಮ್ಮಯ್ಯ, ವಕೀಲೆ ಆಶಾಲತಾ ಪುಟ್ಟೇಗೌಡ, ಯುವ ಕಾಂಗ್ರೆಸ್ ಮುಖಂಡ ಗುರುಕುಮಾರ್, ಅಪ್ಪಾಜಿಗೌಡ, ಸರಸ್ವತಮ್ಮ ಇತರರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಹೋರಾಟಗಾರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡು ರಕ್ಷಣೆ ಒದಗಿಸುವಲ್ಲಿ ಪೊಲೀಸರ ಪಾತ್ರ ದೊಡ್ಡದಾಗಿದ್ದು, ಕೆಳ ಹಂತದಿಂದ ಪೊಲೀಸ್ ಉಪನಿರೀಕ್ಷರಕ ಹಂತದವರೆಗೆ ಪದೋನ್ನತಗೊಂಡ ೨೫ ರಿಂದ ೩೦ ಪೊಲೀಸರಿಗೆ ಕದಂಬ ಆರಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.ಜಿಲ್ಲಾ ಉಪಾಧ್ಯಕ್ಷ ರಾಮು, ಜಿಲ್ಲಾ ಸಂಚಾಲಕ ಸಲ್ಮಾನ್, ಜಿಲ್ಲಾ ಸಲಹೆಗಾರ ಮೋಹನ್ ಚಿಕ್ಕಮಂಡ್ಯ, ಆರಾಧ್ಯ, ರಕ್ಷಿತ್ ಗೋಷ್ಠಿಯಲ್ಲಿದ್ದರು.
19ರಂದು ಬೃಹತ್ ವಾಕಥಾನ್ ಆಂದೋಲನಮಂಡ್ಯ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಜು.19ರಂದು ಬೆಳಗ್ಗೆ 8 ಗಂಟೆಗೆ ಬಾಲ್ಯವಿವಾಹ ಮುಕ್ತ ಜಿಲ್ಲೆ ಕುರಿತು ಬೃಹತ್ ವಾಕಥಾನ್ ಆಂದೋಲನವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಿಂದ ವಿಶ್ವೇಶ್ವರಯ್ಯ ಕ್ರೀಡಾಂಗಣದವರೆಗೆ ಬಾಲ್ಯ ವಿವಾಹ ಮುಕ್ತ ಜಿಲ್ಲೆ ಕುರಿತು ಬೃಹತ್ ವಾಕಥಾನ್ ಆಂದೋಲನ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.