ಕನ್ನಡಪ್ರಭ ವಾರ್ತೆ ನಾಪೋಕ್ಲು
ದೇವಾಲಯದ ಅರ್ಚಕ ರಾಧಾಕೃಷ್ಣ ಭಟ್ಟ ಉಪಸ್ಥಿತಿಯಲ್ಲಿ ವೈದಿಕ ವಿದ್ವಾಂಸ ಬ್ರಹ್ಮಶ್ರೀ ಉದಯತಂತ್ರಿ ನೇತೃತ್ವದಲ್ಲಿ, ಪೌರೋಹಿತ್ಯ ವಾಚಸ್ಪತಿ ವೇದಮೂರ್ತಿ ಗುರುರಾಜ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಪ್ರತಿಷ್ಠಾಪನೆಯ ಬಳಿಕ ಮಧ್ಯಾಹ್ನ ಹೂವಿನಿಂದ ಅಲಂಕೃತ ದೇವರ ಬಿಂಬಕ್ಕೆ ವಿಶೇಷ ಮಹಾಪೂಜೆ ಜರುಗಿತು. ಬಳಿಕ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು.
ಈ ಸಂದರ್ಭ ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ತೇಲಪಂಡ ನಂದ ಮಂದಣ್ಣ, ಉಪಾಧ್ಯಕ್ಷ ಕುಂಚೆಟ್ಟಿರ ಸುಬ್ಬಯ್ಯ, ಕಾರ್ಯದರ್ಶಿ ಕುಂಚೆಟ್ಟಿರ ಗೋಪಾಲ, ಖಜಾಂಚಿ ಪಟ್ಟಮಾಡ ಅಶೋಕ್, ಸದಸ್ಯರಾದ ಕಲ್ಲು ಮಾಡಂಡ ವಾಸು, ಕುಂಚೆಟ್ಟಿರ ರಮೇಶ್, ಚೋಕಿರ ಪೊನ್ನಣ್ಣ, ಕಲ್ಲು ಮಾಡಂಡ ಅಶೋಕ್, ಕುಂಚೆಟ್ಟಿರ ರಮೇಶ್ , ಚೋಕಿರ ಪೊನ್ನಣ್ಣ, ಕೀಪಾಡಂಡ ವಾಸು, ಬೊಳ್ಳಾರ್ಪಂಡ ಚಂಗಪ್ಪ, ತಕ್ಕಮುಖ್ಯಸ್ಥರು, ಚುನಾಯಿತ ಪ್ರತಿನಿಧಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.ಪುನರ್ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಏ.25ರ ವರೆಗೆ ವಿವಿಧ ಪೂಜೆ ಹವನ ಧಾರ್ಮಿಕ ಕಾರ್ಯಕ್ರಮ ಜರುಗಲಿದೆ.* ಶ್ರಮದ ಜೊತೆಗೆ ದೇವರ ಅನುಗ್ರಹ ಇದ್ದರಷ್ಟೇ ನೆಮ್ಮದಿ: ಪೇಜಾವರ ಶ್ರೀಜೀವನದಲ್ಲಿ ನಾವು ಸುಖ ಶಾಂತಿ ನೆಮ್ಮದಿಯನ್ನು ಬಯಸುತ್ತೇವೆ. ನಾವು ಬಯಸಿದ ಕ್ಷಣ ಎಲ್ಲವೂ ನಮ್ಮ ಬಳಿಗೆ ಬರುವುದಿಲ್ಲ. ಅವುಗಳನ್ನು ಪಡೆಯಲು ಸತತ ಶ್ರಮ ಬೇಕು. ಶ್ರಮದ ಜೊತೆಗೆ ದೇವರ ಅನುಗ್ರಹ ಇದ್ದರಷ್ಟೇ ಸುಖ ಶಾಂತಿ ನೆಮ್ಮದಿಯನ್ನು ಗಳಿಸಲು ಸಾಧ್ಯ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಎಲ್ಲ ಕೆಲಸಕ್ಕೂ ಸಮಯವನ್ನು ನಿಗದಿ ಮಾಡುತ್ತೇವೆ, ಉಸಿರಾಟಕ್ಕೆ ಸಮಯ ನಿಗದಿಪಡಿಸಲು ಸಾಧ್ಯವೇ? ಅದೇ ರೀತಿ ಭಗವಂತನ ಆರಾಧನೆಗೆ ಸಮಯದ ಮಿತಿ ಇರಬಾರದು ಎಂದು ಹೇಳಿದರು.
ಬಳಿಕ ನೆರೆದ ಭಕ್ತರು ಸ್ವಾಮೀಜಿಯವರ ಆಶೀರ್ವಾದ ಪಡೆದು ಫಲವನ್ನು ಸ್ವೀಕರಿಸಿ ಪುನೀತ ಭಾವ ಹೊಂದಿದರು.