ಕನ್ನಡಪ್ರಭ ವಾರ್ತೆ ಮಂಗಳೂರು
ಕದ್ರಿ ದೇವಸ್ಥಾನದ ಅಂಗಣದಲ್ಲಿ ಕಟೀಲು ಮೇಳದ ಸೇವೆ ಬಯಲಾಟ ನಡೆಸಿಕೊಂಡು ಬರುತ್ತಿರುವ ಕದ್ರಿ ಯಕ್ಷ ಬಳಗವು ಕೊಡಮಾಡುವ ಪ್ರಶಸ್ತಿಯನ್ನು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಲಕ್ಷ್ಮೀ ನಾರಾಯಣ ಆಸ್ರಣ್ಣ ಅವರು ಪ್ರದಾನ ಮಾಡಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಎ.ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೈದ್ಯ ಡಾ. ಜಯಶಂಕರ್ ಮಾರ್ಲ, ಲೀಲಾಕ್ಷ ಬಿ. ಕರ್ಕೇರ, ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಸಿ.ಎಸ್. ಭಂಡಾರಿ, ರವೀಂದ್ರನಾಥ್ ಶೆಟ್ಟಿ, ರವೀಂದ್ರ ಶೇಟ್, ಸುಣ್ಣoಬಳ ವಿಶ್ವೇಶ್ವರ ಭಟ್, ಜಯಶೀಲ ಅಡ್ಯಂತಾಯ, ಮೂಲ್ಕಿ ಕರುಣಾಕರ ಶೆಟ್ಟಿ, ದಿವಾಕರ ಶೆಟ್ಟಿ ಪರಾರಿ ಗುತ್ತು ಮುಖ್ಯ ಅತಿಥಿಗಳಾಗಿದ್ದರು. ಕದ್ರಿ ನವನೀತ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು.ಕದ್ರಿ ಯಕ್ಷ ಬಳಗದ ಗೌರವ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ತಾರಾನಾಥ ಶೆಟ್ಟಿ ಬೋಳಾರ, ಶಿವ ಪ್ರಸಾದ್ ಪ್ರಭು, ಎಲ್ಲೂರು ರಾಮಚಂದ್ರ ಭಟ್, ಸುಧಾಕರ್ ಶೆಟ್ಟಿ ದೋಣಿಂಜೆ ಗುತ್ತು, ಕೃಷ್ಣ ಶೆಟ್ಟಿ ತಾರೆಮಾರ್, ಹರೀಶ್ ಕುಮಾರ್, ನಿವೇದಿತಾ ಎನ್. ಶೆಟ್ಟಿ, ಬೆಟ್ಟಂಪಾಡಿ ಸುಂದರ ಶೆಟ್ಟಿ, ಮಧುಸೂದನ ಅಲೆವೂರಾಯ ಇದ್ದರು.
ಕಟೀಲು ಮೇಳದವರಿಂದ ‘ದಶಾವತಾರ’ ಯಕ್ಷಗಾನ ಬಯಲಾಟ ಜರಗಿತು.