ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಬಳಿಕ ಮಾತನಾಡಿದ ಅವರು, ಕಣ್ಣಿನ ಅರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಿಕೊಳ್ಳಬೇಕು. ಅದರಲ್ಲೂ ವಯಸ್ಸಾಗಿದ್ದು ದೃಷ್ಟಿ ದೋಷವಿದ್ದವರು, ತಜ್ಞ ವೈದ್ಯರೊಂದಿಗೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಎಲ್ಲ ಕಡೆ ನೇತ್ರ ಚಿಕಿತ್ಸೆ ಉಚಿತವಾಗಿರುತ್ತದೆ. ಗ್ರಾಮೀಣ ಭಾಗದಲ್ಲಿ ನೇತ್ರ ಚಿಕಿತ್ಸಾ ಶಿಬಿರಗಳು ಆಯೋಜನೆಗೊಂಡಾಗ ಸಮಸ್ಯೆಯಿದ್ದವರು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯ ಶಂಕರ್, ಸಿಬ್ಬಂದಿ ವಿಶ್ವರೂಪಚಾರ್, ಹಾಸನ ಅಮ್ಮ ಕಣ್ಣಿನ ಆಸ್ಪತ್ರೆಯ ವೈದ್ಯರಾದ ಪ್ರೀತಿ, ಅಪೂರ್ವ, ಆಶಾ ಕಾರ್ಯಕರ್ತೆಯರಾದ ಈಶ್ವರಿ, ಉಷಾ, ಶೈಲಾ ವಸಂತ್ ಇದ್ದರು.೧೧ಎಸ್‌ಪಿಟಿ೧-ಸೋಮವಾರಪೇಟೆ ಸಮೀಪದ ದೊಡ್ಡಮಳ್ತೆಯ ಕಾಗಡಿಕಟ್ಟೆ ಆಯುಷ್ಮಾನ್ ಅರೋಗ್ಯ ಮಂದಿರದಲ್ಲಿ ನಡೆದ ನೇತ್ರ ತಪಾಸಣಾ ಶಿಬಿರವನ್ನು ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಉದ್ಘಾಟಿಸಿದರು.