ಮಾಗಡಿ: ತಾಲೂಕಿನ ಕಾಗಿಮಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಪರಿಮಳ ಸಹೋದ್ಯೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದಕ್ಕೆ ಅಮಾನತು ಮಾಡಿ ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿ.ಸಿ ಬಸವರಾಜೇಗೌಡ ಆದೇಶ ಹೊರಡಿಸಿದ್ದಾರೆ.
ಈ ಎಲ್ಲಾ ಕಾರಣಗಳಿಂದಾಗಿ ಅಮಾನತ್ತುಗೊಂಡ ಶಿಕ್ಷಕಿ ಪರಿಮಳ ಮೇಲೆ ಎಸ್.ಡಿ.ಎಂ.ಸಿ, ಪೋಷಕರು ಹಾಗೂ ಕಾಗಿಮಡು ಗ್ರಾಮಸ್ಥರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದು ಇಲಾಖೆಯ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದರು.
ಡಿಡಿಪಿಐ ಬಸವರಾಜೇಗೌಡ ಈ ಕುರಿತು ಮಾಗಡಿ ಬಿಇಒಗೆ ತನಿಖೆ ನಡೆಸಿ ವರದಿ ಕೊಡುವಂತೆ ಸೂಚಿಸಿದ್ದರು. ಅನುಚಿತವಾಗಿ ವರ್ತಿಸಿರುವುದು ದೃಢಪಟ್ಟ ನಂತರ ಪರಿಮಳರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಬಿಇಒ ಶಿಫಾರಸ್ಸು ಮಾಡಿದ್ದರು. ಹೀಗಾಗಿ ಡಿಡಿಪಿಐ ಬಸವರಾಜೇಗೌಡ ತಕ್ಷಣದಿಂದಲೇ ಜಾರಿಗೆ ಬರುವಂತೆ ಪರಿಮಳರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.