ಕಾಗೋಡು ಜನ್ಮದಿನ: ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಣೆ

KannadaprabhaNewsNetwork |  
Published : Sep 11, 2026, 01:30 AM IST
ರೋಗಿಗಳಿಗೆ ಹಣ್ಣು ವಿತರಿಸಲಾಯಿತು | Kannada Prabha

ಸಾರಾಂಶ

ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರ 95ನೇ ಜನ್ಮ ದಿನಾಚರಣೆ ಪ್ರಯುಕ್ತ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ಗುರುವಾರ ತಾಯಿಮಗು ಆಸ್ಪತ್ರೆ ಮತ್ತು ಉಪವಿಭಾಗೀಯ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು.

ಕನ್ನಡಪ್ರಭ ವಾರ್ತೆ ಸಾಗರ

ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರ 95ನೇ ಜನ್ಮ ದಿನಾಚರಣೆ ಪ್ರಯುಕ್ತ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ಗುರುವಾರ ತಾಯಿಮಗು ಆಸ್ಪತ್ರೆ ಮತ್ತು ಉಪವಿಭಾಗೀಯ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು.ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಕಲಸೆ ಚಂದ್ರಪ್ಪ ಮಾತನಾಡಿ, ಕಾಗೋಡು ತಿಮ್ಮಪ್ಪನವರು 95ನೇ ವಯಸ್ಸಿಗೆ ಪಾದಾರ್ಪಣೆ ಮಾಡುತ್ತಿದ್ದು, ಸಾಮಾಜಿಕ ನ್ಯಾಯ ಕಲ್ಪಿಸುವ ಕೆಲಸವನ್ನು ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ್ದಾರೆ. ಸಮಾಜ ಕಲ್ಯಾಣ ಸಚಿವರಾಗಿ, ಆರೋಗ್ಯ ಸಚಿವರಾಗಿ ವಿವಿಧ ಖಾತೆ ನಿಭಾಯಿಸುವಾಗ ಸಮರ್ಥ ನಿರ್ಧಾರ ತೆಗೆದುಕೊಂಡು ಸಮಾಜ ಬದಲಾವಣೆಗೆ ಕಾರಣರಾದವರು. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೇ ಶಾಸಕರಾಗಿದ್ದ ಕಾಗೋಡು ತಿಮ್ಮಪ್ಪನವರು ಉಳುವವನೇ ಹೊಲದೊಡೆಯ ಕಾನೂನು ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸುವ ಜತೆಗೆ ಭೂಹಕ್ಕು ಕೊಡುವ ಸಾರ್ಥಕ ಕೆಲಸ ಮಾಡಿದ್ದಾರೆ. ನಾಡಿನ ಜನ ಸದಾ ಸ್ಮರಿಸಿಕೊಳ್ಳುವ ನೂರಾರು ಯೋಜನೆ ಅವರ ಅವಧಿಯಲ್ಲಿ ಅನುಷ್ಠಾನಗೊಂಡಿದೆ ಎಂದರು.ನಗರಸಭೆ ಮಾಜಿ ಅಧ್ಯಕ್ಷೆ ಎನ್.ಲಲಿತಮ್ಮ ಮಾತನಾಡಿ, ರಾಜಕೀಯದಲ್ಲಿ ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ ಸಿಗಬೇಕು ಎಂದು ಪ್ರತಿಪಾದಿಸಿದವರಲ್ಲಿ ಕಾಗೋಡು ತಿಮ್ಮಪ್ಪನವರು ಪ್ರಮುಖರು. ಎಲ್ಲಾ ಜಾತಿ ವರ್ಗದ ಏಳಿಗೆಗೆ ಅವರು ನೀಡಿದ ಕೊಡುಗೆ ಅಪಾರ ಎಂದು ಹೇಳಿದರು.ಸಾಗರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೋಮಶೇಖರ ಲ್ಯಾವಿಗೆರೆ ಮಾತನಾಡಿ, ಕಾಗೋಡು ತಿಮ್ಮಪ್ಪನವರು ನಾಡು ಕಂಡ ಅಪರೂಪದ ರಾಜಕಾರಣಿ. ಅವರ ಹೋರಾಟ ಹೆಜ್ಜೆಯ ಗುರುತು ಯುವ ರಾಜಕಾರಣಿಗಳಗೆ ಸ್ಫೂರ್ತಿದಾಕವಾದದ್ದು. ಅವರ ಜನ್ಮದಿನವನ್ನು ಶಾಸಕರ ಸೂಚನೆ ಮೇರೆಗ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.ತಾಯಿಮಗು ಅಸ್ಪತ್ರೆಯ ಡಾ. ನಾಗೇಂದ್ರಪ್ಪ ಮಾತನಾಡಿದರು. ಕೆ.ಹೊಳೆಯಪ್ಪ, ಎಲ್.ಚಂದ್ರಪ್ಪ, ಗಣಪತಿ ಮಂಡಗಳಲೆ, ವಿಲ್ಸನ್ ಗೋನ್ಸಾಲ್ವಿಸ್, ಗಿರೀಶ್ ಕೋವಿ, ಅನ್ವರ್ ಭಾಷಾ, ಡಿ. ದಿನೇಶ್, ಆಣ್ಣಪ್ಪ ಭೀಮನೇರಿ, ರಮೇಶ್ ಚಂದ್ರಗುತ್ತಿ, ಸರಸ್ವತಿ ನಾಗರಾಜ್ ಇನ್ನಿತರರು ಹಾಜರಿದ್ದರು.\

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಂದ್ರಗುತ್ತಿಯಲ್ಲಿ ದಸರಾ ಉತ್ಸವಕ್ಕೆ ಸಕಲ ಸಿದ್ಧತೆ
₹ 2.5 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗೆ ಚಾಲನೆ: ಎಚ್. ಗಣಪತಿ