ಕನ್ನಡಪ್ರಭ ವಾರ್ತೆ ಬೆಳಗಾವಿ
ಶಹಾಪುರದ ಮಹಾತ್ಮಫುಲೆ ರಸ್ತೆಯ ಬಸವೇಶ್ವರ ಮಂಗಳ ಕಾರ್ಯಾಲಯದಲ್ಲಿ ಬುಧವಾರ ನಡೆದ ವಿಕಸಿತ ಭಾರತ ಕೇಂದ್ರ ಜನಪರ ಬಜೆಟ್ ಕುರಿತು ಮಹಿಳಾ ಸಂವಾದದಲ್ಲಿ ಅವರು ಮಾತನಾಡಿದರು. ರೈತರು, ಬಡವರು, ಯುವಕರು ಮತ್ತು ಮಹಿಳೆಯರ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರದ ನೀತಿಗಳು ರೂಪುಗೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಮಹಿಳಾ ಸಬಲೀಕರಣಕ್ಕೆ ವಿಶೇಷ ಒತ್ತು ನೀಡಿದ್ದು, ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯಾಗಿ ನೇಮಕ ಮಾಡುವ ಮೂಲಕ ಮಹಿಳಾ ಶಕ್ತಿಗೆ ಗೌರವ ನೀಡಲಾಗಿದೆ. ಪ್ರಧಾನಿಯಾಗಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಮಹತ್ವದ ಬದಲಾವಣೆಗಳು ಕಂಡುಬಂದಿವೆ. ಆದರೂ ಕಾಂಗ್ರೆಸ್ ನಾಯಕರು ಪ್ರತಿನಿತ್ಯ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ರಾಜ್ಯ ಸರ್ಕಾರ ಕಳೆದ ಎರಡು ವರ್ಷಗಳಿಂದ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂಬ ಒಂದೇ ಸುಳ್ಳನ್ನು ನೂರು ಬಾರಿ ಹೇಳುತ್ತಿದೆ. ಕಾಂಗ್ರೆಸ್ ದೇಶ ಮತ್ತು ರಾಜ್ಯದಲ್ಲಿ ದೀರ್ಘಕಾಲ ಆಡಳಿತ ನಡೆಸಿದರೂ ಬಡತನ ನಿರ್ಮೂಲನೆ ಆಗಿಲ್ಲ. ಚುನಾವಣೆಗೆ ಮುನ್ನ ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವುದು ರಾಜ್ಯದ ಸ್ಥಿತಿಯನ್ನು ತೋರಿಸುತ್ತದೆ. ಎರಡು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಏನು ಸಾಧಿಸಿದೆ ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪದೇಪದೇ ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ ಎಂದು ದೂರಿದರು.ಯುಪಿಎ ಸರ್ಕಾರದ ಅವಧಿಯಲ್ಲಿ ಹಲವು ಹಗರಣಗಳು ನಡೆದಿದ್ದರೆ, ಮೋದಿ ಸರ್ಕಾರದ 12 ವರ್ಷಗಳಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿಲ್ಲ. ಮೋದಿ ನೇತೃತ್ವದಲ್ಲಿ ಭಾರತ ಆರ್ಥಿಕವಾಗಿ ಬಲಿಷ್ಠವಾಗಿದ್ದು, ಜಾಗತಿಕ ಮಟ್ಟದಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ. ದೇಶದ ಅಭಿವೃದ್ಧಿ ಮತ್ತು ಭದ್ರತೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಲವು ಬಾರಿ ಕೇಂದ್ರ ಬಜೆಟ್ ಮಂಡಿಸಿರುವುದು ಮಹಿಳಾ ಶಕ್ತಿಯ ಪ್ರತೀಕ. ಪ್ರಧಾನಿ ನರೇಂದ್ರ ಮೋದಿ ಮಹಿಳೆಯರ ಮೇಲೆ ನಂಬಿಕೆ ಇಟ್ಟು ದೇಶ ಮುನ್ನಡೆಸುತ್ತಿದ್ದಾರೆ. ತಮಗೆ ನೀಡಿದ ಸತ್ಕಾರ ಮತ್ತು ಗೌರವ ವ್ಯಕ್ತಿಗತವಲ್ಲ, ಜಿಲ್ಲೆಯ ಎಲ್ಲಾ ನಾಗರಿಕರ ಆಶೀರ್ವಾದದಿಂದ ಸಿಕ್ಕಿದ್ದು. ಮುಂದಿನ ದಿನಗಳಲ್ಲಿ ಮಹಿಳಾ ಶಕ್ತಿಯೊಂದಿಗೆ ಬಿಜೆಪಿ ರಾಜ್ಯ ಮತ್ತು ದೇಶದಲ್ಲಿ ಮತ್ತಷ್ಟು ಬಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-----
ರಾಜ್ಯದ ಒಟ್ಟು ತೆರಿಗೆಗಳಲ್ಲಿ ಬೆಂಗಳೂರು ಶೇ.90ರಷ್ಟು ಕೊಡುಗೆ ನೀಡುತ್ತದೆ. ಬೆಂಗಳೂರಿನ ಜನರು ತಮ್ಮ ತೆರಿಗೆ ಹಣ ಸಂಪೂರ್ಣ ಬೆಂಗಳೂರಿನ ಅಭಿವೃದ್ಧಿಗೆ ಬಳಸಬೇಕು ಎಂದು ಕೇಳಿದರೆ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರು ಏನು ಉತ್ತರ ನೀಡುತ್ತಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಹೆಚ್ಚು ತೆರಿಗೆ ನೀಡುವ ರಾಜ್ಯಗಳು. ಈ ಹಣದಿಂದ ಹಿಂದುಳಿದ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ.