ಬಿಜೆಪಿಯ ಷಡ್ಯಂತ್ರದ ಬಗ್ಗೆ ಕೈ ಕಾರ್ಯಕರ್ತರು ಜಾಗರೂಕರಾಗಿರಿ-ಶಾಸಕ ಮಾನೆ

KannadaprabhaNewsNetwork |  
Published : Jan 10, 2026, 02:15 AM IST
ಹಾನಗಲ್‌ನಲ್ಲಿ ನಡೆದ ನಗರ ವ್ಯಾಪ್ತಿಯ ಎಲ್ಲ ವಾರ್ಡುಗಳ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಶಾಸಕ ಶ್ರೀನಿವಾಸ ಮಾನೆ ಮಾತನಾಡಿದರು. | Kannada Prabha

ಸಾರಾಂಶ

ಹಾನಗಲ್‌ನಲ್ಲಿ ನಡೆದ ನಗರ ವ್ಯಾಪ್ತಿಯ ಎಲ್ಲ ವಾರ್ಡುಗಳ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಶಾಸಕ ಶ್ರೀನಿವಾಸ ಮಾನೆ ಮಾತನಾಡಿದರು.

ಹಾನಗಲ್ಲ: ಮತ ವಿಭಜನೆಯ ಷಡ್ಯಂತ್ರ ಹೂಡಿರುವ ಬಿಜೆಪಿ ವಿರೋಧ ಪಕ್ಷಗಳನ್ನು ದುರ್ಬಲಗೊಳಿಸುವ ಹುನ್ನಾರ ನಡೆಸಿದೆ. ಬಿಜೆಪಿಗೆ ತನ್ನ ಜನಪರ ಸಾಧನೆ, ಕೆಲಸ ಮುಂದಿಟ್ಟುಕೊಂಡು ರಾಜಕಾರಣ ಮಾಡುವ ಶಕ್ತಿ ಇಲ್ಲ ಎಂಬುದು ಈಗ ಇದರಿಂದ ಸಾಬೀತಾಗುತ್ತಿದೆ. ದೇಶವನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ಬಗ್ಗೆ ಜಾಗರೂಕತೆ ವಹಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಶಾಸಕ ಶ್ರೀನಿವಾಸ ಮಾನೆ ಕರೆ ನೀಡಿದರು.ಪಟ್ಟಣದ ತಮ್ಮ ಜನಸಂಪರ್ಕ ಕಚೇರಿಯಲ್ಲಿ ನಗರ ವ್ಯಾಪ್ತಿಯ ಎಲ್ಲ ವಾರ್ಡುಗಳ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಪ್ರೀತಿ, ವಿಶ್ವಾಸ, ಸಹೋದರತೆ, ಸೌಹಾರ್ದತೆ ನೆಲೆಯೂರಬೇಕಾದರೆ ಕಾಂಗ್ರೆಸ್ ಆಡಳಿವೇ ಇರಬೇಕು. ಕಾಂಗ್ರೆಸ್ ಆಡಳಿತ ನಡೆಸಿದ ಸಂದರ್ಭದಲ್ಲೆಲ್ಲ ಬಡವರನ್ನೊಳಗೊಂಡಂತೆ ಎಲ್ಲ ವರ್ಗದ ಜನ ನೆಮ್ಮದಿಯಿಂದ ಜೀವನ ನಡೆಸಿದ್ದಾರೆ. ಭಾರತದ ಸಂವಿಧಾನದಲ್ಲಿನ ಅಂಶಗಳನ್ನೆಲ್ಲ ಪಾಲಿಸುವ ಯಾವುದಾದರೂ ಪಕ್ಷ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ ಎನ್ನುವ ಸತ್ಯ ಎಲ್ಲರೂ ಅರಿಯಬೇಕಿದೆ. ಪಡಿತರ ವ್ಯವಸ್ಥೆ, 18ನೇ ವಯಸ್ಸಿಗೆ ಮತದಾನ, ಕಂಪ್ಯೂಟರ್ ಕ್ರಾಂತಿ, ಮೀಸಲಾತಿ ಹೀಗೆ ದೇಶಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ದೇಶದ ಸಾಲ ಇದೀಗ ಬರೋಬ್ಬರಿ 215 ಲಕ್ಷ ಕೋಟಿಯಷ್ಟಾಗಿದೆ. ಪ್ರತಿಯೊಬ್ಬರ ತಲೆ ಮೇಲೆ ಸಾಲದ ಹೊರೆ ಹೆಚ್ಚುತ್ತಲೇ ಇದೆ. ಹೀಗಿದ್ದರೂ ಬಿಜೆಪಿ ಮುಖಂಡರು ಮಾತ್ರ ಬಣ್ಣದ ಮಾತುಗಳು, ಹಸಿ ಸುಳ್ಳುಗಳ ಮೂಲಕ ಭಾವನಾತ್ಮಕ ಸಂಗತಿ ಮುಂದಿಟ್ಟು ಮೋಸ ಈ ದೇಶದ ಜನತೆಗೆ ಮಾಡುತ್ತಿದ್ದಾರೆ. ಇದರ ಬಗ್ಗೆ ಅರಿವು ಮೂಡಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿ ಎಂದರು. ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ 15-20 ವರ್ಷಗಳಿಂದ ಸಮಸ್ಯೆಗಳಿವೆ. ಶಾಸಕ ಶ್ರೀನಿವಾಸ ಮಾನೆ ಅವರ ಕಾಳಜಿಯಿಂದ ಸಮಸ್ಯೆಗಳು ಒಂದೊಂದಾಗಿ ಪರಿಹಾರ ಕಾಣುತ್ತಿವೆ. ಎಲ್ಲವನ್ನೂ ಒಂದೇ ಬಾರಿಗೆ ಪರಿಹರಿಸುವುದು ಅಸಾಧ್ಯ. ರಾಜಕಾರಣ, ಆಡಳಿತ ವ್ಯವಸ್ಥೆ ಬದಲಾಗಿದೆ. ಪಾರದರ್ಶಕತೆ ಬಂದಿದೆ. ಹಾಗಾಗಿ ವಾಸ್ತವ ಸಂಗತಿಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅಗತ್ಯವಿದೆ. ಎಲ್ಲರೂ ಒಗ್ಗೂಡಿ ಕಾಂಗ್ರೆಸ್ ಪಕ್ಷದ ಶಕ್ತಿಯನ್ನು ಹೆಚ್ಚಿಸುವಂತೆ ಕರೆ ನೀಡಿದರು. ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಪುರಸಭೆ ಮಾಜಿ ಅಧ್ಯಕ್ಷರಾದ ಪರಶುರಾಮ ಖಂಡೂನವರ, ಮಮತಾ ಆರೆಗೊಪ್ಪ, ಖುರ್ಷಿದ್‌ಅಹ್ಮದ್ ಹುಲ್ಲತ್ತಿ, ಮಾಜಿ ಉಪಾಧ್ಯಕ್ಷೆ ಶಂಶಿಯಾ ಬಾಳೂರ, ಮುಖಂಡರಾದ ದುದ್ದುಸಾಬ ಅಕ್ಕಿವಳ್ಳಿ, ಸಿಕಂದರ್ ವಾಲಿಕಾರ, ರವಿ ದೇಶಪಾಂಡೆ ಇದ್ದರು.ಕಳೆದ 8 ವರ್ಷಗಳಿಂದ ವಸತಿ ಯೋಜನೆಗಳ ಫಲಾನುಭವಿಗಳಿಗೆ ನೀಡುವ ಸಹಾಯಧನದ ಕೇಂದ್ರ ಸರ್ಕಾರದ ಪಾಲು ಬಂದಿಲ್ಲ. 15ನೇ ಹಣಕಾಸು ಆಯೋಗದ ಅನುದಾನವೂ ಬಿಡುಗಡೆಯಾಗಿಲ್ಲ. ಯುಜಿಡಿ, ಕುಡಿಯುವ ನೀರು, ಚರಂಡಿ ಇನ್ನಿತರ ಕಾಮಗಾರಿಗಳಿಗೆ ನೀಡುತ್ತಿದ್ದ ಶೇ. 80ರಷ್ಟು ಅನುದಾನವನ್ನೂ ಕೇಂದ್ರ ಸರ್ಕಾರ ನೀಡುತ್ತಿಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ