ಯಡವಾರೆಯ ಅರೆಭಾಷೆಯ ಗೌಡ ಸಮಾಜದ ವತಿಯಿಂದ 8ನೇ ವರ್ಷದ ಕೈಲ್ ಮುಹೂರ್ತ ಸಂತೋಷ ಕೂಟ ಸಮಾಜದ ಸಭಾಂಗಣದಲ್ಲಿ ನಡೆಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವಾರೆಯ ಅರೆಭಾಷೆ ಗೌಡ ಸಮಾಜದ ವತಿಯಿಂದ 8ನೇ ವರ್ಷದ ಕೈಲ್‌ಮೂರ್ತ ಸಂತೋಷ ಕೂಟ ಸಮಾಜದ ಸಭಾಂಗಣದಲ್ಲಿ ನಡೆಯಿತು.ಸಭಾ ಕಾರ್ಯಕ್ರಮವನ್ನು ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿ, ಇಂದಿನ ಹೈಟೆಕ್ ಯುಗದಲ್ಲಿ ನಮ್ಮ ಸಂಸ್ಕೃತಿಯನ್ನು ಎಲ್ಲರೂ ಮರೆಯುತ್ತಿದ್ದಾರೆ. ಸಮಾಜದ ಕಲೆ ಸಂಸ್ಕೃತಿ ಉಳಿಸಿ ಬೆಳೆಸಲು ಇಂತಹ ಕಾರ್ಯಕ್ರಮಗಳಿಂದ ಸಹಕಾರಿಯಾಗಲಿದೆ. ನಮ್ಮ ಮಕ್ಕಳಿಗೆ ಸಂಸ್ಕೃತಿಯ ಅರಿವನ್ನು ಮೂಡಿಸುವ ಕೆಲಸವನ್ನು ಪೋಷಕರು ಮಾಡದಿದ್ದಲ್ಲಿ, ಹಿರಿಯರು ಕಾಪಾಡಿಕೊಂಡು ಬಂದ ಸಂಸ್ಕೃತಿ ಪರಿಚಯದಿಂದ ಮುಂದಿನ ತಲೆಮಾರು ಕಳೆದುಕೊಳ್ಳಲಿದೆ. ಆದುದರಿಂದ ಇಂತಹ ಕಾರ್ಯಕ್ರಮಗಳನ್ನು ಇನ್ನೂ ಹೆಚ್ಚಾಗಿ ಆಚರಿಸುವುದರೊಂದಿಗೆ, ಕುಟುಂಬದ ಎಲ್ಲರೂ ಪಾಲ್ಗೊಳ್ಳುವಂತೆ ಮಾಡಬೇಕೆಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಗೂರು ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ಬಾರನ ಬಿ. ಭರತ್‌ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಗೌರವಾಧ್ಯಕ್ಷ ಪೊನ್ನಚನ ಕೆ. ಗಣಪತಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ಕಾಫಿ ಬೆಳೆಗಾರರಾದ ಕಾಸ್ಪಾಡಿ ಬಿ. ತಮ್ಮುಯ್ಯ, ಪಾಣತ್ತಲೆ ಜಿ. ಜನಾರ್ಧನ ಇದ್ದರು. ಈ ಸಂದರ್ಭ ಮಾಜಿ ಅಧ್ಯಕ್ಷ ಕಡ್ಲೇರ ಹೊನ್ನಪ್ಪ ಮತ್ತಿತರರು ಇದ್ದರು. ಕಾರ್ಯಕ್ರಮದ ಪ್ರಯುಕ್ತ ಸಮಾಜ ಬಾಂಧವರಿಗೆ ನಡೆದ ವಿವಿಧ ಕ್ರೀಡಾ ಸ್ಪರ್ಧೆಯನ್ನು ಯಡವಾರೆ ಕಾಫಿ ಬೆಳೆಗಾರರಾದ ಕಾಸ್ಪಾಡಿ. ಬಿ. ತಮ್ಮಯ್ಯ ಉದ್ಘಾಟಿಸಿದರು. ಇದೇ ಸಂದರ್ಭ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕಾಳೇರಮ್ಮನ ಸಾವಿತ್ರಿ ಪಾಲಾಕ್ಷ ಪ್ರೋತ್ಸಾಹ ಧನ ವಿತರಿಸಿದರು. ಪದವಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಚೆರಿಯಮನೆ ರಾಮಪ್ಪ ಪ್ರೋತ್ಸಾಹ ಧನ ನೀಡಿದರು.ಚಿಕ್ಕ ಮಕ್ಕಳಿಗೆ ಕಾಳು ಹೆಕ್ಕುವ ಸ್ಪರ್ಧೆ, ವಿದ್ಯಾರ್ಥಿಗಳಿಗೆ ಓಟದ ಸ್ಪರ್ಧೆ, ಸಮಾಜ ಬಾಂಧವರಿಗೆ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ, ಲಿಂಬೆಹಣ್ಣನ್ನು ಚಮಚದಲ್ಲಿರಿಸಿ ಬಾಯಿಯಲ್ಲಿಟ್ಟು ಓಡುವ ಸ್ಪರ್ಧೆ, ಬಾಂಬ್ ಇಂದ ಸಿಟಿ, ಪಾಸಿಂಗ್ ದ ಬಾಲ್ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆ ನಡೆದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.