ಕನ್ನಡಪ್ರಭ ವಾರ್ತೆ ಚಿಂತಾಮಣಿ
ಕೈವಾರ, ಮಸ್ತೇನಹಳ್ಳಿ ಪಂಚಾಯಿತಿಗಳನೊಳಗೊಂಡಂತೆ ಕೈವಾರ ಹೋಬಳಿ ಕೇಂದ್ರವನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ ಉದ್ದೇಶವಿದ್ದು, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.ಕೈವಾರ ಗ್ರಾಮದ ೪ನೇ ಬ್ಲಾಕ್‌ನಲ್ಲಿ ರಸ್ತೆ ಅಭಿವೃದ್ಧಿ, ಎಲ್ಲಮ್ಮನ ಗುಡಿ ಬೀದಿಯಲ್ಲಿ ರಸ್ತೆ ಅಭಿವೃದ್ಧಿ, ಶಾದಿಮಹಲ್ ಕಟ್ಟಡದ ಮೊದಲನೇ ಮಹಡಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಫಂಕ್ಷನ್ ಹಾಲ್ ಮತ್ತು ಕೊಠಡಿಗಳ ನಿರ್ಮಾಣ ಕಾಮಗಾರಿಗಳ ಭೂಮಿಪೂಜೆ ಸೇರಿದಂತ ೮೯.೨೦ ಲಕ್ಷ ರುಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಸರ್ಕಾರಕ್ಕೆ ಪ್ರಸ್ತಾವನೆಕೈವಾರ, ಮಸ್ತೇನಹಳ್ಳಿ ಪಂಚಾಯಿತಿಗಳು ಒಳಗೊಂಡಂತೆ ಕೈವಾರ ಹೋಬಳಿ ಕೇಂದ್ರವನ್ನು ಪಪಂಯನ್ನಾಗಿ ಮೇಲ್ದರ್ಜೆಗೇರಿಸುವ ಉದ್ದೇಶವಿದ್ದು, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಕನಿಶೆಟ್ಟಿಹಳ್ಳಿ, ಕಾಗತಿ ಪ್ರದೇಶ ವ್ಯಾಪ್ತಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಾಡಲು ೨೦೦೦ ಎಕರೆ ಭೂಮಿ ಗುರುತಿಸಲಾಗಿದೆ ಎಂದರು.
ತಾಲೂಕಿನ ಮುರುಗಮಲ್ಲ ದರ್ಗಾವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ೩೨ ಕೋಟಿ ರುಪಾಯಿಗಳನ್ಮು ಬಿಡುಗಡೆ ಮಾಡಿದ್ದು, ಇನ್ನೆರಡು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿ ಆರಂಭವಾಗಲಿದೆ ಎಂದರು.ಮುರುಗಮಲ್ಲಾ ದರ್ಗಾ ಅಭಿವೃದ್ಧಿ
ಮುರುಗಮಲ್ಲಾ ಸುಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು, ಇಲ್ಲಿನ ದರ್ಗಾಗೆ ಹಲವು ಭಾಗಗಳಿಂದ ಹಿಂದೂ ಮುಸ್ಲಿಂ ಬಾಂಧವರು ಬರುತ್ತಾರೆ. ಮುರುಗಮಲ್ಲಾ ದರ್ಗಾ ಅಭಿವೃದ್ಧಿಪಡಿಸಲು ಇದೇ ಮೊದಲ ಬಾರಿಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ೩೨ ಕೋಟಿ ರುಪಾಯಿಗಳಷ್ಟು ದೊಡ್ಡ ಮೊತ್ತವನ್ನು ನೀಡಿದೆ. ಕೈವಾರದಲ್ಲಿನ ಈದ್ಗಾ ಸಮಸ್ಯೆಯನ್ನು ಕೆಲವೇ ದಿನಗಳಲ್ಲಿ ಸ್ಥಳೀಯ ಮುಖಂಡರ ಸಭೆ ಕರೆದು ಬಗೆ ಹರಿಸಲಾಗುವುದೆಂದು ಭರವಸೆಯಿತ್ತರು.ತಹಸೀಲ್ದಾರ್ ಸುದರ್ಶನ್ ಯಾದವ್, ತಾ.ಪಂ. ಇಒ ಎಸ್.ಆನಂದ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಂಗಮಶೀಗೆಹಳ್ಳಿ ಮುನಿನಾರಾಯಣಪ್ಪ, ಮಸ್ತೇನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ರೋಜಾ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾಬಾ ನಾಗರಾಜ್, ಉಪಸ್ಥಿತರಿದ್ದರು.