ಕಕ್ಕಬ್ಬೆ ಕುಂಜಿಲ ಮಹಿಳಾ ಗ್ರಾಮ ಸಭೆ

KannadaprabhaNewsNetwork |  
Published : Dec 12, 2025, 03:00 AM IST
ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿಯ 2025- 26ನೇ ಸಾಲಿನ ಮಹಿಳಾ ಗ್ರಾಮ ಸಭೆಯನ್ನು ಪಂಚಾಯಿತಿ ಅಧ್ಯಕ್ಷರಾದ ಶಿಲ್ಪಾ ಲೋಕೇಶ್ ರವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಯಿತು. | Kannada Prabha

ಸಾರಾಂಶ

ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿಯ 2025-26ನೇ ಸಾಲಿನ ಮಹಿಳಾ ಗ್ರಾಮಸಭೆ ಪಂಚಾಯಿತಿ ಸಭಾಂಗಣದಲ್ಲಿ ಜರುಗಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿಯ 2025- 26ನೇ ಸಾಲಿನ ಮಹಿಳಾ ಗ್ರಾಮ ಸಭೆಯನ್ನು ಸೋಮವಾರ ಪಂಚಾಯಿತಿ ಸಭಾಂಗಣದಲ್ಲಿ ಜರುಗಿತು.

ಪಂಚಾಯಿತಿ ಅಧ್ಯಕ್ಷರಾದ ಶಿಲ್ಪಾ ಲೋಕೇಶ್ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕೃಷಿ ಸಖಿ ಯರಾದ ಗಿರಿಜಾ ರವರು ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯದ ಬಗ್ಗೆ ಸಭೆಯಲ್ಲಿ ಮಾಹಿತಿಯನ್ನು ನೀಡಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ನಂತರ ಪಂಚಾಯಿತಿಯ ಅಧ್ಯಕ್ಷರು ಸಭೆಯನ್ನು ಉದ್ದೇಶಿಸಿ ಮಾತನಾಡಿ ಮಹಿಳೆಯರಿಗೆ ಪಂಚಾಯಿತಿ ಮೂಲಕ ವಿವಿಧ ಇಲಾಖೆಗಳಿಂದ ಚಿಕ್ಕ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಮನವಿ ಮಾಡಿಕೊಂಡರು.

ಈ ಸಂದರ್ಭ ಪಂಚಾಯಿತಿಯ ಉಪಾಧ್ಯಕ್ಷರಾದ ಬೀನ ಸುಚಿತ್ರ, ಸದಸ್ಯರು ಕಲಿಯಂಡ ಸಂಪನ್ ಅಯ್ಯಪ್ಪ, ಚೋಯ ಮಾಡಂಡ ಹರೀಶ್ ಮೊಣ್ಣಪ್ಪ ತುಕಡಿ ಸಫಿಯ ನಂಬುಡಮಂಡ ಶೈಲಾ ಕೋಡಿಮಣಿಯಂಡ ಬೊಪಣ್ಣ, ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರು ಸೇರಿದಂತೆ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲಾ ಮಕ್ಕಳ ಜನ್ಮದಿನಕ್ಕೆ ಇನ್ನು ಖುದ್ದು ಡಿಕೆ ಶುಭಾಶಯ
ಗೃಹಲಕ್ಷ್ಮಿ ಆಧಾರ್‌- ವೋಟರ್‌ ಐಡಿ ಲಿಂಕ್‌ ಆಗಿದ್ದರಷ್ಟೇ ಹಣ