ಕಕ್ಕಬೆ ಕೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಾಕಿ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿಗೆ ಸಮೀಪದ ಕಕ್ಕಬೆ ಕೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಾಕಿ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಗೋಣಿಕೊಪ್ಪದಲ್ಲಿ ನಡೆದ ಲಯನ್ಸ್ ಸಂಸ್ಥೆಯು ಆಯೋಜಿಸಿದ 6(ಎ) ಸೈಡ್ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬೆ ಕೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡು ದ್ವಿತೀಯ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಮಾರ್ಗದರ್ಶನ ನೀಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.