
ಕನ್ನಡಪ್ರಭ ವಾರ್ತೆ ಕಲಬುರಗಿ
ಜಿಲ್ಲಾಡಳಿತ, ಅರಣ್ಯ ಇಲಾಖೆ, ಕೆ.ಕೆ.ಆರ್.ಡಿ.ಬಿ. ಮಂಡಳಿ ಹಾಗೂ ಮೂರ್ತಿ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಸೋಮವಾರ ಚಿತ್ತಾಪುರ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ಸುಮಾರು 43 ಎಕರೆ ಪ್ರದೇಶದ ವಿಸ್ತೀರ್ಣದಲ್ಲಿ 35 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಕಲಬುರಗಿ ಮೃಗಾಲಯವನ್ನು
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನಮ್ಮ ಸರ್ಕಾರ ಬಂದ ಮೇಲೆ ನೆನೆಗುದ್ದಿಗೆ ಬಿದಿದ್ದ ಈ ಕಾರ್ಯಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಶೇಷ ಆಸಕ್ತಿ ವಹಿಸಿ ಚುರುಕುಗೊಳಿಸಿದ ಪರಿಣಾಮ ಇಂದಿಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹಂಪಿ ಹೊರತುಪಡಿಸಿದರೆ ಎರಡನೇ ಮೃಗಾಲಯ ಪ್ರದೇಶಕ್ಕೆ ಲೋಕಾರ್ಪಣೆ ಮಾಡಲಾಗಿದ್ದು, ಎಲ್ಲಾ ವಯೋಮಾನದವರಿಗೆ ಜನಾಕರ್ಷಣೆಯಾಗಲಿದೆ ಎಂದರು.
ನೂತನ ಮೃಗಾಲಯದಲ್ಲಿ 56 ವಿವಿಧ ಪ್ರಭೇದದ ಪ್ರಾಣಿ-ಪಕ್ಷಿಗಳು ವೀಕ್ಷಣೆಗೆ ಲಭ್ಯ ಇರಲಿವೆ. ಎರಡು ಸಿಂಹಗಳನ್ನು ಬನ್ನೇರುಘಟ್ಟದಿಂದ ಈಗಾಗಲೇ ತರಲಾಗಿದೆ. ಮೊಸಳೆ, ನರಿ, ಇತ್ಯಾದಿ ಪ್ರಾಣಿಗಳು ನೋಡಲು ಸಿಗುತ್ತಿವೆ. ಮುಂಬರುವ ದಿನಗಳಲ್ಲಿ ಬೇರೆ ಬೇರೆ ಪ್ರಭೇದ ಪ್ರಾಣಿ, ಪಕ್ಷಿಗಳನ್ನು ತರಿಸಲಾಗುವುದು ಎಂದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಳೆದ ಮೂರು ವರ್ಷದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 11 ಲಕ್ಷ ಸಸಿ ನೆಡಲಾಗಿದೆ. ಅವುಗಳನ್ನು ಸುಮಾರು ಶೇ.80 ನೆಟ್ಟ ಸಸಿಗಳು ಬದುಕುಳಿದಿವೆ ಎಂದರು.
ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕ್ರಮ: ರಾಜ್ಯದ ಅರಣ್ಯ ಭೂಮಿ ತೆರವಿಗೆ ಕ್ರಮವಹಿಸಲಾಗಿದ್ದು, ರಾಜ್ಯದಲ್ಲಿ ಈಗಾಗಲೇ 10,000 ಕೋಟಿ ರು. ಮೌಲ್ಯದ ಬೆಂಗಳೂರು ಒಂದರಲ್ಲೇ 250 ಎಕರೆ ಅರಣ್ಯ ಭೂಮಿ ತೆರವು ಮಾಡಲಾಗಿದೆ. ಸುಮಾರು 1 ಕೋಟಿ ಎಕರೆ ಅರಣ್ಯ, ಕಂದಾಯ ಒತ್ತುವರಿ ಜಮೀನು ತೆರವು ಹಂತ ಹಂತವಾಗಿ ನಡೆಯಲಿದೆ ಎಂದರು.ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಡಾ. ಶರಣಪ್ರಕಾಶ ಪಾಟೀಲ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಕೆ.ರಂಗಸ್ವಾಮಿ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ.ವೈ.ಪಾಟೀಲ, ವಿಪ ಸದಸ್ಯ ಜಗದೇವ ಗುತ್ತೇದಾರ, ಬಿ.ಜಿ.ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ, ಕೆ.ಕೆ.ಆರ್.ಟಿ.ಸಿ. ಅಧ್ಯಕ್ಷ ಅರುಣಕುಮಾರ ಪಾಟೀಲ, ಕಲಬುರಗಿ ಕಾಡಾ ಅಧ್ಯಕ್ಷ ಡಾ.ಎಂ.ಎ.ರಶೀದ್, ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಶರಣಕುಮಾರ ಮೋದಿ, ಅರಣ್ಯ ಪಡೆ ಮುಖ್ಯಸ್ಥರು ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಮೀನಾಕ್ಷಿ ನೇಗಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ ಪುಷ್ಕರ್, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವಿಶಂಕರ ಎಸ್. ಎಸ್., ಕಲಬುರಗಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ, ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನುವಾಸುಲು, ಜಿಪಂ ಸಿ.ಇ.ಓ ಭಂವರ್ ಸಿಂಗ್ ಮೀನಾ, ಕಲಬುರಗಿ ಮಹಾನಗರ ಪಾಲಿಕೆ ಡಿ.ಸಿ.ಎಫ್ ಸುಮಿತ್ ಪಾಟೀಲ, ಇನ್ಫೋಸಿಸ್ ಸಂಸ್ಥೆಯ ಪ್ರತಿನಿಧಿ ಪ್ರಿಯಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬಸವರಾಜ ಎಸ್. ಡಾಂಗೆ, ಸುನೀಲಕುಮಾರ್, ವಲಯ ಅರಣ್ಯಾಧಿಕಾರಿಗಳಾದ ನಾಗೇಶ, ವಿಜಯ ಕುಮಾರ ಸೇರಿದಂತೆ ಅರಣ್ಯ ಇಲಾಖೆಯ ಅನೇಕ ಅಧಿಕಾರಿ-ಸಿಬ್ಬಂದಿಗಳಿದ್ದರು.
ಮೃಗಾಲಯವು ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ತೆರೆಯಲಿದ್ದು, ಪ್ರಾಣಿ-ಪಕ್ಷಿಗಳ ವೀಕ್ಷಣೆಗೆ ಲಭ್ಯವಾಗಿರಲಿದೆ. ಪ್ರತಿ ಮಂಗಳವಾರ ರಜೆ ಇರಲಿದೆ. 12 ವರ್ಷ ಮೇಲ್ಪಟ್ಟವರಿಗೆ 75 ರು., 12 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ 40 ರು. ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 25 ರು. ಟಿಕೆಟ್ ದರ ನಿಗದಿ ಮಾಡಲಾಗಿದೆ. ಮೃಗಾಲಯದ ಟಿಕೆಟ್ ಕೌಂಟರ್‌ನಲ್ಲಿಯೆ ಟಿಕೆಟ್ ಪಡೆದು ವೀಕ್ಷಣೆ ಮಾಡಬಹುದಾಗಿದೆ