ಕಲಬುರಗಿ: ಎಐಸಿಸಿ ಅಧ್ಯಕ್ಷರಾಗಿರುವ ರಾಜ್ಯಸಭೆ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಮಗ ಮಿಲಿಂದ್ ಖರ್ಗೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಕಳೆದ ಮೂರ್ನಾಲ್ಕು ವರ್ಷದಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಮಿಲಿಂದ್‌ಗೆ ಬಹುಕಾಲ ಚೆನ್ನೈ ಹಾಗೂ ದೆಹಲಿಯಲ್ಲೇ ಚಿಕಿತ್ಸೆ ನೀಡಲಾಗಿತ್ತು. ಇದೀಗ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದೆ.