ಕನ್ನಡಪ್ರಭ ವಾರ್ತೆ ಕಲಬುರಗಿ
ಬೆಳಗ್ಗೆ 8.30 ಕ್ಕೆ ಧ್ವಜಾರೋಹಣ ನೆರವೇರಿಸಿ, ನಂತರ ಬೆಳಗ್ಗೆ 9.30 ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಛೇರಿಯಿಂದ ಕನ್ನಡ ಭವನದ ವರೆಗೆ ವಿವಿಧ ಕಲಾ ಮೇಳಗಳೊಂದಿಗೆ ಸಮ್ಮೇಳನಾಧ್ಯಕ್ಷರ ಸಾಂಸ್ಕøತಿಕ ಮೆರವಣಿಗೆ ಜರುಗಲಿದೆ.
10.45 ಕ್ಕೆ ಸಾಹಿತಿ ಶಿವಕವಿ ಹಿರೇಮಠ ಜೋಗೂರ ವೇದಿಕೆಯಡಿಯಲ್ಲಿ ಜರುಗಲಿರುವ ಸಮ್ಮೇಳನವನ್ನು ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೂಜ್ಯ ಶ್ರೀ ಡಾ. ಲಿಂಗರಾಜಪ್ಪ ಅಪ್ಪ ಅವರು ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಆಶಯ ನುಡಿಗಳನ್ನಾಡುವರು.ರಂಗಾಯಣ ನಿರ್ದೇಶಕಿ ಡಾ.ಸುಜಾತಾ ಜಂಗಮಶೆಟ್ಟಿ ಅವರು ಹಿಂದಿನ ತಾಲೂಕಾ ಸಾಹಿತ್ಯ ಸಮ್ಮೇಳನಾಧ್ಯಕ್ಷರುಗಳ ಬದುಕು-ಬರಹಗಳನ್ನೊಳಗೊಂಡ ಹೊನ್ನುಸಿರು ಎಂಬ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದು, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ. ನಾಗೇಂದ್ರ ಮಸೂತಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ತಾಲೂಕಾ ಸಾಹಿತ್ಯ ಸಮ್ಮೇಳನಗಳ ಹಿಂದಿನ ಸರ್ವಾಧ್ಯಕ್ಷರುಗಳನ್ನು ಇದೇ ಸಂದರ್ಭದಲ್ಲಿ ವಿಶೇಷವಾಗಿ ಸತ್ಕರಿಸಲಾಗುವುದು.
2.15 ಕ್ಕೆ ಹಿರಿಯ ಸಾಹಿತಿ ಡಾ. ರಾಜೇಂದ್ರ ಯರನಾಳೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕವಿಗೋಷ್ಠಿಯಲ್ಲಿ ಪತ್ರಕರ್ತ-ಸಾಹಿತಿ ಸಂಗಮನಾಥ ರೇವತಗಾಂವ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಶರಣರಾಜ ಛಪ್ಪರಬಂದಿ ಸೇರಿ ಅನೇಕರು ಉಪಸ್ಥಿತರಿರುವರು. 4.15 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಸೇರಿ ಅನೇಕ ಗಣ್ಯರು ಉಪಸ್ಥಿತರಿರುವರು.
ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಬಲತ್ಕಾರ, ಶೋಷಣೆ ಹೆಚ್ಚುತ್ತಿದ್ದು, ಸುರಕ್ಷತೆ ಇಲ್ಲದಂತಾಗಿದೆ ಎಂದು ತಾಲೂಕಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷ ಪ್ರಮೀಳಾ ಜಾನಪ್ಪಗೌಡ ಅವರು ಹೇಳಿದರು.
ಇಂಗ್ಲೀಷ್ ವ್ಯಾಮೋಹ ಬಿಟ್ಟು ಕನ್ನಡದ ಕಾರ್ಯಗಳನ್ನು ಗೌರವಿಸುವಂಥ ಕೆಲಸ ಆಗಬೇಕು. ಜೀವನ ಮೌಲ್ಯಗಳನ್ನು ಮರೆತು ಬದುಕು ಸಾಗಿಸುವ ಒತ್ತಡದಲ್ಲಿದ್ದೇವೆ. ಮೌಲ್ಯಗಳು ನಮ್ಮ ಬದುಕು ಹಸನಾಗಿಸುತ್ತವೆ. ಸುಖ ಸಂತೋಷಗಳು ಮೌಲ್ಯಗಳ ಜೊತೆಯಲ್ಲಿವೆ. ತಾಯಿ, ಗುರು, ರೈತ, ಸೈನಿಕ ಮತ್ತು ಸಾಹಿತಿಗಳು ಸಮಾಜದ ನಿಜವಾದ ಆಸ್ತಿವಂತರು.
ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ತಾಲೂಕಾಧ್ಯಕ್ಷ ಗುರುಬಸಪ್ಪ ಸಜ್ಜನಶೆಟ್ಟಿ, ಸ್ವಾಗತ ಸಮಿತಿ ಅಧ್ಯಕ್ಷ ವಿನೋದ ಪಾಟೀಲ ಸರಡಗಿ, ಕಾರ್ಯಾಧ್ಯಕ್ಷ ರಾಘವೇಂದ್ರ ಕಲ್ಯಾಣಕರ್ ಮಾತನಾಡಿದರು. ವಿಷಲಾಕ್ಷಿ ಮಾಯಣ್ಣವರ್, ವಿಶ್ವನಾಥ ಯನಗುಂಟಿ, ಕುಪೇಂದ್ರ ಬರಗಾಲಿ ವೇದಿಕೆ ಮೇಲಿದ್ದರು.