ರಾಜ್ಯಕ್ಕೆ ಇಂದು ನರೇಂದ್ರ ಮೋದಿ ಭೇಟಿ: ಪ್ರಧಾನಿ ಸ್ವಾಗತಕ್ಕೆ ಕಲಬುರಗಿ ಜಿಲ್ಲಾಡಳಿತ ರೆಡಿ

KannadaprabhaNewsNetwork |  
Published : Jan 19, 2024, 01:49 AM ISTUpdated : Jan 19, 2024, 07:25 AM IST
ಫೋಟೋ- 18ಜಿಬಿ9 ಮತ್ತು 18ಜಿಬಿ10ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ನೇತೃತ್ವದಲ್ಲಿಂದು ಜಿಲ್ಲಾಡಳಿತದ ಪ್ರಮುಖರ ಸಭೆ ನಡೆದು ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯ್ತು. | Kannada Prabha

ಸಾರಾಂಶ

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆ.9.35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ಪ್ರಧಾನಮಂತ್ರಿ ನರೇಂದ್ರ ಮೋದಿ  ಇಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆ.9.35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ಬೆ.9.40 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಪ್ರಯಾಣಿಸಿ ಅಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮರಳಿ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ನಂತರ ಮ.1.05ಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

ಪ್ರಧಾನಮಂತ್ರಿ ಪ್ರವಾಸ ಹಿನ್ನೆಲೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆಯಲ್ಲದೆ ಶಿಷ್ಠಾಚಾರ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚಿಸಿದ್ದಾರೆ.

ಪ್ರಧಾನಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಗುರುವಾರ ತಮ್ಮ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಪ್ರಧಾನಮಂತ್ರಿಗಳ ಪ್ರವಾಸ ಹಿನ್ನೆಲೆಯಲ್ಲಿ ಶಿಷ್ಠಚಾರ, ಭದ್ರತೆ, ಸಾರಿಗೆ ಸೇರಿದಂತೆ ಒಟ್ಟಾರೆ 19 ಅಧಿಕಾರಿಗಳ ತಂಡ ರಚಿಸಲಾಗಿದೆ. 

ಈ ಎಲ್ಲಾ ತಂಡಗಳು ಪ್ರಧಾನಮಂತ್ರಿಗಳು ಭದ್ರತೆಯ ಜವಾಬ್ದಾರಿ ಹೊತ್ತಿಕೊಂಡಿರುವ ಎಸ್.ಪಿ.ಜಿ. (ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ತಂಡದೊಂದಿಗೆ ಸಮನ್ವಯತೆ ಸಾಧಿಸಿ ತಮಗೆ ನೀಡಲಾದ ಕೆಲಸಗಳನ್ನು ಅಚ್ಚುಕಟ್ಟಾಗಿ ನೆರವೇರಿಸಬೇಕು ಎಂದು ಸೂಚಿಸಿದ್ದಾರೆ.

ನಿಲ್ದಾಣದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನುರಿತ ವೈದ್ಯರೊಂದಿಗೆ ಅಂಬುಲೆನ್ಸ್, ಅಗ್ನಿಶಾಮಕ ವಾಹನ, ಎಸ್.ಪಿ.ಜಿ. ತಂಡದ ಜೊತೆಗೆ ಪೊಲೀಸ್ ಭದ್ರತೆ ಒದಗಿಸಬೇಕು.

 ಗಣ್ಯಾತಿಗಣ್ಯರ ಲಘು ಉಪಹಾರ, ಸಾರಿಗೆ, ವಸತಿ ಸರಿಯಾಗಿ ನೋಡಿಕೊಳ್ಳಬೇಕು. ವಿಮಾನ ನಿಲ್ದಾಣದಲ್ಲಿ ಗಣ್ಯರ ಮತ್ತು ಅಧಿಕಾರಿಗಳ ವಾಹನ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವುದು. ಸಂಚಾರ ದಟ್ಟಣೆ ಆಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ದೇವಿದಾಸ್ ಪಾಟೀಲ, ಡಿ.ಸಿ.ಎಫ್. ಸುಮಿತ್ ಪಾಟೀಲ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕೆ.ಕೆ.ಆರ್.ಟಿ.ಸಿ. ಎಂ.ಡಿ. ಎಂ.ರಾಚಪ್ಪ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಕಸಿತ ಭಾರತ ಸಾಕಾರಕ್ಕೆ ಕೇಂದ್ರ ಬಜೆಟ್ ಪೂರಕ : ಕೆ ಜಿ ಬೋಪಯ್ಯ
ಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿದ ಯೋಧ ಸ್ವಗ್ರಾಮಕ್ಕೆ ಆಗಮನ