ಕಲಾಜಾಥ ವಿಶೇಷ ಪ್ರಚಾರ ಆಂದೋಲನ

KannadaprabhaNewsNetwork |  
Published : Feb 23, 2026, 02:45 AM IST
ಚಿತ್ರ :  20ಎಂಡಿಕೆ4 : ಕಲಾಜಾಥ ವಿಶೇಷ ಪ್ರಚಾರ ಆಂದೋಲನಕ್ಕೆ ಜಿಲ್ಲಾಧಿಕಾರಿ ಚಾಲನೆ ನೀಡಿದರು.  | Kannada Prabha

ಸಾರಾಂಶ

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಲಾಜಾಥ ವಿಶೇಷ ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಶುಕ್ರವಾರ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಲಾಜಾಥ ವಿಶೇಷ ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಶುಕ್ರವಾರ ಚಾಲನೆ ನೀಡಿದರು. ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಕಂಜರ ಬಾರಿಸುವ ಮೂಲಕ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಸೇರಿದಂತೆ ಸರ್ಕಾರದ ಹಲವು ವಿಷಯಗಳ ಕುರಿತು ವಿಶೇಷ ಪ್ರಚಾರಾಂದೋಲನವನ್ನು ಜಿಲ್ಲೆಯ ಹಲವು ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು. ಸರ್ಕಾರದ ಗ್ಯಾರಂಟಿ ಯೋಜನೆಗಳು ಒಂದಲ್ಲ ಒಂದು ರೀತಿಯಲ್ಲಿ ಜನರಿಗೆ ತಲುಪುತ್ತಿದ್ದು, ಈ ಯೋಜನೆಗಳ ಮಹತ್ವ ಕುರಿತು ಕಲಾಜಾಥ ಮೂಲಕ ವಿಶೇಷ ಪ್ರಚಾರಾಂದೋಲನ ಆಯೋಜಿಸಲಾಗಿದೆ ಎಂದರು. ಕಲಾವಿದ ಈ.ರಾಜು ಮತ್ತು ತಂಡದವರು ಯೋಜನೆ ಯೋಜನೆ ಬಂತಣ್ಣ. ಗ್ಯಾರಂಟಿ ಯೋಜನೆ ಬಂತಣ್ಣ ಮಹಿಳೆಯರ ಪಾಲಿಗೆ ದಾರಿ ದೀಪವಣ್ಣ, ಬಡವರ ಮುಖದಲ್ಲಿ ನಗೆ ಮೂಡಿತಣ್ಣ ಹಾಡು ಹಾಡುವ ಮೂಲಕ ಗಮನ ಸೆಳೆದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ಭೀಮರಾಯ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಹೇಮಂತ್ ರಾಜ್, ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಶಾಲೆ ದುಬೈ ವಾರ್ಷಿಕೋತ್ಸವಕ್ಕೆ ಗೌರ್ನರ್‌ಗೆ ಆಹ್ವಾನ
ಬಾಯಿಮುಚ್ಕೊಂಡಿದ್ರೆ ಒಳ್ಳೇದು : ಮೂವರು ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ವಾರ್ನಿಂಗ್