ಕನ್ನಡಪ್ರಭ ವಾರ್ತೆ ಮೂಡಲಗಿ
ಬುಧವಾರ ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀರಾಮ ಮಂದಿರ ಹತ್ತಿರ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಯೋಜನೆಯಡಿ ₹10 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುವ ಪ್ರವೃತ್ತಿ ಕಡಿಮೆಯಾಗಿದೆ. ವೈಯಕ್ತಿಕ ಲಾಭ ಎಂಬ ಮನೋಭಾವ ಎಲ್ಲರಲ್ಲೂ ಮೂಡುತ್ತಿದೆ. ಈ ಮನೋಭಾವ ಬದಿಗಿರಿಸಿ ಸಮಾಜ ಕಟ್ಟುವ ಕೆಲಸಕ್ಕೆ ಕೈಜೋಡಿಸಬೇಕು ಎಂದ ಅವರು, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಮದುವೆ ಸಮಾರಂಭ, ಬಡ ಕುಟುಂಬದ ಜನರಿಗೆ ಅನುಕೂಲವಾಗುವಂತೆ ಈ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತದೆ. ಪಟ್ಟಣದ ಸಮಾಜ ಬಂಧುಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು
ಪ್ರಮುಖರಾದ ಸುರೇಶ ಕಬ್ಬೂರ, ದತ್ತು ಕಲಾಲ, ಚಂದು ಕಲಾಲ, ಮನೋಹರ ಕಲಾಲ, ಬಸವರಾಜ ಕಡಾಡಿ, ಶ್ರೀಶೈಲ ತುಪ್ಪದ, ಲೋಹಿತ ಕಲಾಲ, ಶಾನೂರ ಕಲಾಲ, ಕಿರಣ ಕಲಾಲ, ಗುರುನಾಥ ಮಧಬಾಂವಿ, ಶಿವಲಿಂಗ ಕುಂಬಾರ, ದಶಗೀರ ನದಾಫ್, ಸೋಮಲಿಂಗ ಹಡಗಿನಾಳ ಇತರರು ಇದ್ದರು.