20 ರಂದು ಪುತ್ತೂರಲ್ಲಿ ‘ಕಲಾರ್ಣವ-2025’: ಆಹ್ವಾನ ಪತ್ರಿಕೆ ಬಿಡುಗಡೆ

KannadaprabhaNewsNetwork |  
Published : Dec 10, 2025, 02:00 AM IST
ಫೋಟೋ: 6ಪಿಟಿಆರ್‌-ಬಿಡುಗಡೆಶಾಸಕ ಅಶೋಕ್ ಕುಮಾರ್ ರೈ  ಆಹ್ವಾನ ಪತ್ರ ಬಿಡುಗಡೆಗೊಳಿಸಿದರು.  | Kannada Prabha

ಸಾರಾಂಶ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಗಡಿ- ಸಂಸ್ಕೃತಿ ಉತ್ಸವ ಅಂಗವಾಗಿ ‘ಕಲಾರ್ಣವ-2025’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ಶಾಸಕ ಅಶೋಕ್ ರೈ ಬಿಡುಗಡೆಗೊಳಿಸಿದರು.

ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಸಹಯೋಗ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದಲ್ಲಿ 20ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಗಡಿ- ಸಂಸ್ಕೃತಿ ಉತ್ಸವ ಅಂಗವಾಗಿ ‘ಕಲಾರ್ಣವ-2025’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಆಹ್ವಾನ ಪತ್ರವನ್ನು ಶಾಸಕ ಅಶೋಕ್ ಕುಮಾರ್ ರೈ ಶನಿವಾರ ಪುತ್ತೂರಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯ ವಿನಯ ಸುವರ್ಣ, ಬೊಳುವಾರು ಬನ್ನೂರು ರೈತರ ಸೇವಾ ಸಹಕಾರಿ ಸಂಘ ನಿರ್ದೇಶಕ ಸುಭಾಸ್‌ ನಾಯಕ್‌, ನೃತ್ಯೋಪಾಸನಾ ಕಲಾ ಅಕಾಡೆಮಿ ಸ್ಥಾಪಕ ಟ್ರಸ್ಟಿ ಹಾಗೂ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್, ಕಾರ್ಯದರ್ಶಿ ಆತ್ಮಭೂಷಣ್ ಮತ್ತಿತರರಿದ್ದರು.ವಯಲಿನ್‌ ಕಲಾವಿದೆ ಗಂಗಾ ಶಶಿಧರ್‌, ಶಮಂತಕ ಪುತ್ತೂರಿಗೆ:ಅಂತಾರಾಷ್ಟ್ರೀಯ ಖ್ಯಾತಿಯ ವಯಲಿನ್‌ ಬಾಲ ಕಲಾವಿದೆ ಗಂಗಾ ಶಶಿಧರನ್‌ ಮೊದಲ ಬಾರಿಗೆ ಪುತ್ತೂರಿಗೆ ಆಗಮಿಸುತ್ತಿದ್ದು, ಅವರ ವಯಲಿನ್‌ ವೈಭವ ನಡೆಯಲಿದೆ. ಡ್ಯಾನ್ಸ್‌ ಫೆಡರೇಶನ್‌ ಆಫ್‌ ಇಂಡಿಯಾದ ಯುವ ಕಲಾ ಪ್ರಶಸ್ತಿ ಪುರಸ್ಕೃತ ಭರತನಾಟ್ಯ ಬಾಲಕಲಾವಿದ ಮಾಸ್ಟರ್‌ ಶಮಂತಕ ಇವರಿಂದ ಭರತನಾಟ್ಯ ಏರ್ಪಡಲಿದೆ. ರಾಜ್ಯದ ವಿವಿಧ ಜಾನಪದ ಕಲಾ ತಂಡಗಳ ಜಾನಪದ ನೃತ್ಯ ಪ್ರದರ್ಶನ ನಡೆಯಲಿದೆ. ಕಲಾರ್ಣವ-2025ನ್ನು ಶಾಸಕ ಅಶೋಕ್‌ ಕುಮಾರ್‌ ರೈ ಉದ್ಘಾಟಿಸಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೃದ್ಧೆ ಮನೆಯಲ್ಲಿ ಚಿನ್ನ ಕದ್ದಿದ್ದಮಹಿಳಾ ಕೇರ್‌ಟೇಕರ್‌ ಸೆರೆ
ತಾಯಿಗೆ ಬೈದಿದ್ದಕ್ಕೆ ಅಣ್ಣನಿಗೆಚಾಕು ಇರಿದು ಕೊಂದ ತಮ್ಮ