ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ
ಬನಹಟ್ಟಿಯ ಲಕ್ಷ್ಮೀ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ ಎಫ್‌ಎಸ್ ಎಲ್ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನದ ಚಟುವಟಿಕೆಗಳ ಬಲವರ್ಧನೆಗೆ ಕಲಿಕಾ ಹಬ್ಬ ಸಹಾಯಕ. ಶೈಕ್ಷಣಿಕ ಪರಿಸರದ ಬೆಂಬಲ ವ್ಯವಸ್ಥೆ ಗಟ್ಟಿಗೊಳಿಸಿ ಪರಸ್ಪರ ಹಂಚಿಕೊಂಡ ಕಲಿಕೆಯ ಅನುಭವಗಳು ಮಕ್ಕಳು ಮತ್ತು ಆ ಶಾಲೆಯ ಸರ್ವತೋಮುಖ ಬೆಳವಣಿಗೆಗೆ ಸಹಾಯಕವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಬಸವರಾಜ ಹನಗಂಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಬಹಳಷ್ಟು ವಿಭಿನ್ನ ರೀತಿಯ ಕಾರ್ಯಕ್ರಮ ಹಮ್ಮಿಕೊಂಡು, ಮಕ್ಕಳಿಗೆ ಪ್ರೇರಣೆ ನೀಡುವಂತಹ ಅಂಶಗಳು ಇಲಾಖೆಯಿಂದ ಹಮ್ಮಿಕೊಳ್ಳುತ್ತಿರುವುದು ತುಂಬಾ ಸಂತಸದ ವಿಷಯ ಎಂದರು.ಸರ್ಕಾರಿ ನೌಕರ ಸಂಘದ ರಾಜ್ಯ ಪರಿಷತ್ ಸದಸ್ಯ ಪ್ರಶಾಂತ್ ಹೊಸಮನಿ, ಶಿಕ್ಷಣ ಸಂಯೋಜಕ ಬಿ.ಎಮ್ ಹಳೆಮನಿ, ಬನಹಟ್ಟಿ ತಾಲೂಕು ಶಿಕ್ಷಕರ ಸೊಸೈಟಿ ಅಧ್ಯಕ್ಷ ಲೋಕೇಶ್ ಹಂಜಗಿ ಮಾತನಾಡಿದರು.
ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸಿಕಂದರ್, ಸಿಆರ್ಪಿಗಳಾದ ಸಂತೋಷ ಬಡ್ಡಿ, ದಾಕ್ಷಾಯಿಣಿ ಮಂಡಿ, ಶಿವಕುಮಾರ್ ಕೋಕಟನೂರ, ಮಹೇಶ ಸೋರಗಾಂವಿ, ಜಗದೀಶ ಕುಲಹಳ್ಳಿ, ಗಜಾನಂದ ಹತ್ತಳ್ಳಿ, ಕೆ. ಎನ್. ತೆಲಗಾಂವ, ಎಸ್.ಬಿ. ಪೂಜಾರಿ, ಗುರ್ಲಹೊಸೂರ್, ಸುಮಿತ್ರಾ ಮಾದನಮಟ್ಟಿ, ಶ್ರೀದೇವಿ ಕಲಕಂಬ ಇತರರು ಇದ್ದರು.