ಪುತ್ತೂರು: ಪ್ರಚೋದನಾಕಾರಿ ಭಾಷಣ ಆರೋಪದ ಹಿನ್ನೆಲೆಯಲ್ಲಿ ಪುತ್ತೂರಿನ ಮಾನವ ಬಂಧುತ್ವ ವೇದಿಕೆಯ ವತಿಯಿಂದ ನೀಡಲಾಗಿರುವ ದೂರಿನಂತೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಆರ್‌ಎಸ್‌ಎಸ್ ಪ್ರಮುಖ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಖಾಸಗಿ ಯೂಟ್ಯೂಬ್ ಚಾನಲ್ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.ಕಾರ್ಯಕ್ರಮದಲ್ಲಿ ಕೋಮುಧ್ವೇಷ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಡಾ.ಕಲ್ಲಡ ಪ್ರಭಾಕರ ಭಟ್ ವಿರುದ್ದ ಹಾಗೂ ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ಚಾನಲ್ ಹಾಗೂ ಸದ್ರಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ದ ಕಾನೂನುಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 10/2026, ಕಲಂ:196,299,302,353(2),3(5) BNS ರಂತೆ ಪ್ರಕರಣ ದಾಖಲಿಸಲಾಗಿದೆ.
ದೂರು ನೀಡುವ ಸಂದರ್ಭ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಅಮಳ ರಾಮಚಂದ್ರ, ಪ್ರಮುಖರಾದ ಎಂ.ಬಿ ವಿಶ್ವನಾಥ ರೈ, ಮೌರಿಸ್ ಮಸ್ಕರೇನಸ್, ಎಚ್ ಮಹಮ್ಮದ್ ಆಲಿ, ಕೆನ್ಯೂಟ್ ಮಸ್ಕರೇನಸ್, ಡಾ. ರಾಜಾರಾಮ್ ಕೆ.ಬಿ, ಬೋಲೋಡಿ ಚಂದ್ರಹಾಸ ರೈ, ಶಶಿಕಿರಣ್ ರೈ, ಅಬ್ದುಲ್ ರೆಹಮಾನ್ ಯೂನಿಕ್, ಉಲ್ಲಾಸ್ ಕೋಟ್ಯಾನ್, ಪ್ರಕಾಶ್ ಗೌಡ ತೆಂಕಿಲ ಮತ್ತಿತರರು ಇದ್ದರು.