ಕನ್ನಡಪ್ರಭ ವಾರ್ತೆ ಬೆಳಗಾವಿ
ಚಂದನಹೊಸೂರು ಗ್ರಾಮದ ಕಲ್ಮೇಶ್ವರ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸುಮಾರು ₹2 ಕೋಟಿ ವೆಚ್ಚದಲ್ಲಿ ದೇವಸ್ಥಾನ ಕಟ್ಟಡ ನಿರ್ಮಾಣವಾಗಲಿದ್ದು, ಈಗಾಗಲೇ ಮೊದಲನೇ ಹಂತದಲ್ಲಿ ₹40 ಲಕ್ಷ ಹಾಗೂ 2ನೇ ಹಂತದಲ್ಲಿ ₹40 ಲಕ್ಷ ಒಟ್ಟು ₹80 ಲಕ್ಷ ಬಿಡುಗಡೆಗೊಂಡಿದ್ದು, ಇನ್ನುಳಿದ ಹಣ ಹಂತ ಹಂತವಾಗಿ ಬಿಡುಗಡೆಗೊಳ್ಳಲಿದೆ ಎಂದರು.
ಕ್ಷೇತ್ರದ ಜನರ ಆಶೋತ್ತರಗಳು ಹಾಗೂ ಭಾವನೆಗಳನ್ನು ಅರ್ಥಮಾಡಿಕೊಂಡು ಕೆಲಸ ಮಾಡುತ್ತಿರುವೆ. ಕೇವಲ ಚುನಾವಣೆ ಸಮಯದಲ್ಲಿ ಗ್ರಾಮಗಳಿಗೆ ನಾನು ಬರುವುದಿಲ್ಲ. ಗ್ರಾಮದ ಅಭಿವೃದ್ಧಿ ಕೆಲಸಗಳಿಗೆ ಸ್ಪಂದಿಸದ ಕೆಲ ಮಂದಿ ಮೋದಿ ಹೆಸರು ಹೇಳಿಕೊಂಡು ಚುನಾವಣೆ ವೇಳೆ ಮತ ಕೇಳಲು ಬರುತ್ತಾರೆ. ನಾನು ಜನರೊಂದಿಗೆ ಸದಾ ಒಡನಾಟ ಇಟ್ಟಿಕೊಂಡಿರುವೆ ಎಂದರು.ಕಾರ್ಯಕ್ರಮದಲ್ಲಿ ಹಣಬರಟ್ಟಿಯ ಬಸವಲಿಂಗ ಶಿವಾಚಾರ್ಯರು, ಮುತ್ನಾಳ ಕೇದಾರ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯರು, ಚಂದನಹೊಸೂರು-ಸುತಗಟ್ಟಿ ಸಿದ್ದಲಿಂಗ ಶಿವಾಚರ್ಯ ಸ್ವಾಮೀಜಿ, ಬಡೇಕೊಳ್ಳಿಮಠದ ಶಿವಯೋಗಿ ನಾಗೇಂದ್ರ ಸ್ವಾಮೀಜಿ, ವೇದಮೂರ್ತಿ ಮಹೇಶ ಸ್ವಾಮೀಜಿ, ಗಂಗಯ್ಯ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಉಪಸ್ಥಿತರಿದ್ದರು.