ಪ್ರತಿಭೆ ಹೊರಹೊಮ್ಮಲು ಕಲೋತ್ಸವ ಉತ್ತಮ ವೇದಿಕೆ: ಡಾ. ಎಂ.ಸಿ. ಸುಧಾಕರ್

KannadaprabhaNewsNetwork |  
Published : Jan 18, 2026, 02:30 AM IST
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಮಾತನಾಡಿದರು. | Kannada Prabha

ಸಾರಾಂಶ

ಗದಗ ನಗರದ ಭೂಮರಡ್ಡಿ ಸರ್ಕಲ್ ಹತ್ತಿರದ ಜ. ತೋಂಟದಾರ್ಯ ಪ್ರೌಢಶಾಲೆಯಲ್ಲಿ ಶನಿವಾರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಉದ್ಘಾಟಿಸಿದರು.

ಗದಗ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಕಲೋತ್ಸವ ಉತ್ತಮ ವೇದಿಕೆಯಾಗಿದೆ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು.

ನಗರದ ಭೂಮರಡ್ಡಿ ಸರ್ಕಲ್ ಹತ್ತಿರದ ಜ. ತೋಂಟದಾರ್ಯ ಪ್ರೌಢಶಾಲೆಯಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಲ್ಲಿರುವ ಪ್ರತಿಭೆಯನ್ನು ನಾವು ಊಹಿಸಲು ಸಾಧ್ಯವಿಲ್ಲ. ಆದರೆ, ಪ್ರತಿಭಾ ಕಾರಂಜಿ ಕಾರ್ಯಕ್ರಮದಿಂದ ಮಕ್ಕಳ ಪ್ರತಿಭೆ ಅನಾವರಣ ಸಾಧ್ಯವಾಗುತ್ತದೆ. ಮಕ್ಕಳ ವಿಚಾರಕ್ಕೆ ಬಂದಾಗ ನಾವು ಬಾಲ್ಯದಲ್ಲಿ ನಡೆದು ಬಂದ ದಾರಿಯನ್ನು ಸ್ಮರಿಸಿಕೊಳ್ಳುತ್ತೇವೆ. ವ್ಯಕ್ತಿಯ ಜೀವನದಲ್ಲಿ ಬಾಲ್ಯಾವಸ್ಥೆ ಅತ್ಯುತ್ತಮ ಕ್ಷಣವಾಗಿರುತ್ತದೆ. ಶಿಕ್ಷಕರ ವೃತ್ತಿ ಪವಿತ್ರವಾಗಿದೆ. ಮಕ್ಕಳು ಶಾಲೆಗೆ ಬಂದಾಗ ಅವರ ಪ್ರತಿಭೆ ಗುರುತಿಸುವವರೇ ಶಿಕ್ಷಕರು. ಬಾಲ್ಯದಲ್ಲಿ ನೃತ್ಯ, ಸಂಗೀತ, ಚಿತ್ರಕಲೆ ಮುಂತಾದ ಕಲೆಗಳನ್ನು ಕಲಿತುಕೊಂಡು ಜೀವನದಲ್ಲಿ ಉಜ್ವಲ ಭವಿಷ್ಯ ನಿರ್ಮಾಣ ಮಾಡಬಹುದು. ಶಿಕ್ಷಕರು ಮಕ್ಕಳಲ್ಲಿ ಅಡಕವಾಗಿರುವ ಕಲೆಯನ್ನು ಪ್ರೋತ್ಸಾಹಿಸಬೇಕು. ಮಕ್ಕಳು ಪ್ರತಿಭಾ ಕಾರಂಜಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು. ವಿದ್ಯಾವಂತರಾಗಿ ಉನ್ನತ ಹುದ್ದೆ ಅಲಂಕರಿಸಿ ಸದೃಡ ದೇಶ ನಿರ್ಮಾಣ ಮಾಡಬೇಕು ಎಂದರು.

ವಿಪ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಉನ್ನತ ಶಿಕ್ಷಣ ಸಚಿವರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದು ಬಹಳ ಹೆಮ್ಮೆಯ ವಿಷಯ. ಪಾಲಕರು ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು. ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಉತ್ತಮವಾದ ಪ್ರದರ್ಶನ ನೀಡಿ ಮಕ್ಕಳು ಉನ್ನತ ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕು. ಶಿಕ್ಷಕರು ಮಕ್ಕಳಲ್ಲಿನ ಪ್ರತಿಭೆ ಪ್ರೋತ್ಸಾಹಿಸಬೇಕು ಎಂದರು.

ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಡಯಟ್ ಉಪನಿರ್ದೇಶಕ ಜಿ.ಎಂ. ಮುಂದಿನಮನಿ, ಪಿ.ಎಂ. ಪೋಷಣ ಶಕ್ತಿ ನಿರ್ಮಾಣ ಶಿಕ್ಷಣಾಧಿಕಾರಿ ಸರಸ್ವತಿ ಕನವಳ್ಳಿ, ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಎಚ್.ಬಿ. ರಡ್ಡೇರ, ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ, ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ. ಶೆಟ್ಟೆಪ್ಪನವರ, ಎಸ್.ಎನ್. ಬಳ್ಳಾರಿ, ಡಾ. ಬಸವರಾಜ ಬಳ್ಳಾರಿ, ಎಸ್.ಎಸ್. ಪಟ್ಟಣಶೆಟ್ಟರ್, ಬಿ.ಎಫ್. ಪೂಜಾರ, ವಿ.ಎಂ. ಹಿರೇಮಠ, ಹಾಲನಗೌಡ ಪಾಟೀಲ, ಬಿ.ಕೆ. ನಿಂಬನಗೌಡ್ರ ಸೇರಿದಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು, ಶಾಲಾ ಮಕ್ಕಳು ಇದ್ದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಸ್ವಾಗತಿಸಿದರು. ಎಂ.ಎ. ಯರಗುಡಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲಾಸ್ಪತ್ರೆ ರಸ್ತೆ ಗುಣಮಟ್ಟ ಪರಿಶೀಲಿಸಿದ ನಳಿನ್ ಅತುಲ್
ಸಾಯುವ ಒಳಗಾದರೂ ನಿವೇಶನ ಭಾಗ್ಯ ಕಲ್ಪಿಸಿ!