49 ಲಕ್ಷ ರು. ವೆಚ್ಚದಲ್ಲಿ ಕಲ್ಸಂಕ ಫ್ರೀ ಲೆಫ್ಟ್ ಕಾಮಗಾರಿಗೆ ಚಾಲನೆ

KannadaprabhaNewsNetwork |  
Published : Feb 03, 2026, 02:45 AM IST
ಉಡುಪಿ ನಗರದ ಕಲ್ಸಂಕದಲ್ಲಿ ಫ್ರೀ ಲೆಪ್ಟ್‌ ಲೇನ್ ಕಾಮಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು.  | Kannada Prabha

ಸಾರಾಂಶ

ನಗರಸಭೆಯ ಮೂಲಕ 49 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಲ್ಸಂಕ- ಅಂಬಾಗಿಲು ತಿರುವು ಸೇತುವೆ ಅಗಲೀಕರಣ (ಫ್ರೀ ಲೆಫ್ಟ್ ಲೇನ್) ಕಾಮಗಾರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು.

ಉಡುಪಿ: ನಗರಸಭೆಯ ಮೂಲಕ 49 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಲ್ಸಂಕ- ಅಂಬಾಗಿಲು ತಿರುವು ಸೇತುವೆ ಅಗಲೀಕರಣ (ಫ್ರೀ ಲೆಫ್ಟ್ ಲೇನ್) ಕಾಮಗಾರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು. ಉಡುಪಿ ನಗರದ ವಾಹನ ದಟ್ಟಣೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಬಹು ವರ್ಷಗಳ ಬೇಡಿಕೆಯಾಗಿದ್ದ ಫ್ರೀ ಲೆಫ್ಟ್ ಕಾಮಗಾರಿಗೆ ನಗರಸಭೆಯ ಮೂಲಕ ಅನುದಾನ ಒದಗಿಸಲಾಗಿದ್ದು, ಇದರಿಂದ ಅಂಬಾಗಿಲು ಕಡೆಗೆ ಸಾಗುವ ವಾಹನಗಳ ಸಂಚಾರ ಸುಗಮವಾಗಲಿದೆ, ಟ್ರಾಫಿಕ್ ಜಾಮ್ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದರು.ಈ ಸಂದರ್ಭ ನಗರಸಭೆ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಟಿ.ಜಿ.ಹೆಗ್ಡೆ, ಗಿರೀಶ್ ಅಂಚನ್, ಸುಂದರ ಕಲ್ಮಾಡಿ, ಜಯಂತಿ ಪೂಜಾರಿ, ಅಶೋಕ್ ನಾಯ್ಕ್, ಗಿರಿಧರ ಆಚಾರ್ಯ, ಲಕ್ಷ್ಮೀ ಮಂಜುನಾಥ, ಸವಿತಾ ಹರೀಶ್ ರಾಮ್, ಭಾರತಿ ಪ್ರಶಾಂತ್, ಮಾನಸ ಸಿ. ಪೈ, ಅನಿಟ ಡಿಸೋಜ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ, ಪ್ರಮುಖರಾದ ಕಿಶೋರ್ ಕರಂಬಳ್ಳಿ, ದಯಾಶಿನಿ ಮೊದಲಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

25 ವರ್ಷದಲ್ಲಿ ರೈತರಿಗೆ 111 ಲಕ್ಷ ಕೋಟಿ ನಷ್ಟ: ಶರ್ಮಾ
ಆಟೋ ಗ್ಲಾಸ್ ಒಡೆದಿದ್ದಕ್ಕೆಸ್ನೇಹಿತನ ಕೊಂದ ಚಾಲಕ