ಗುರುಮಠಕಲ್: ತೋಟ್ಲೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವಕರ್ಮ ಜಯಂತಿ ಹಾಗೂ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಮತ್ತು ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್ಡಿಎಂಸಿ ಅಧ್ಯಕ್ಷ ರವಿ ನೆರವೇರಿಸಿದರು. ಮುಖ್ಯಗುರು ಸೂರ್ಯಕಾಂತ ಕಲ್ಯಾಣ ಕರ್ನಾಟಕ ಉತ್ಸವದ ಕುರಿತು ಮಾತನಾಡಿದರು. ಶಿಕ್ಷಕ ರಾಮುಲು ಮಾತನಾಡಿ, ಭಗವಾನ್ ವಿಶ್ವಕರ್ಮ ಕುರಿತು ತಿಳಿಸಿದರು. ಕೊಂಕಲ್ ವಲಯದ ಕ್ರೀಡಾಕೂಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಕೆ ವಿವಿಧ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ಹಿನ್ನೆಲೆ ಗಣ್ಯರಿಂದ ಸನ್ಮಾನ ಮಾಡಲಾಯಿತು. ಶಿಕ್ಷಕಿ ಶರೀಫಾ ಬೇಗಂ, ಆಸಿಂ ಜುಬೇರ್, ನರಸಪ್ಪ, ಸಂಜೀವಪ್ಪ, ಭೀಮಪ್ಪ ಇದ್ದರು.
18ವೈಡಿಆರ್10 ತೋಟ್ಲೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವಕರ್ಮ ಜಯಂತಿ ಹಾಗೂ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಮತ್ತು ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
------