ಕಲ್ಯಾಣ ಕರ್ನಾಟಕ ಉತ್ಸವ ಕಾಟಾಚಾರದ ಆಚರಣೆ ಬೇಡ

KannadaprabhaNewsNetwork |  
Published : Sep 18, 2024, 01:47 AM IST
17ಕೆಪಿಎಲ್ಎನ್ಜಿ01 | Kannada Prabha

ಸಾರಾಂಶ

ಲಿಂಗಸುಗೂರು ಪಟ್ಟಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭದಲ್ಲಿ ಶಾಸಕ ಮಾನಪ್ಪ ವಜ್ಜಲ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಲಿಂಗಸುಗೂರು

ಸಾವಿರಾರು ಜನರ ತ್ಯಾಗ ಬಲಿದಾನದಿಂದ ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯಗೊಂಡಿದ್ದು, ಇಂತಹ ವಿರೋಚಿತ ಹೋರಾಟದ ದಿನವನ್ನು ತಾಲೂಕ ಆಡಳಿತ ಕಾಟಾಚಾರಕ್ಕೆ ಆಚರಣೆ ಮಾಡಬಾರದು ಎಂದು ಶಾಸಕ ಮಾನಪ್ಪ ವಜ್ಜಲ್ ತಾಲೂಕ ಆಡಳಿತದಿಂದ ನಡೆದ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ನಡೆದ ಸಾರ್ವಜನಿಕ ಧ್ವಜಾರೋಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯಸಿಕ್ಕ ದಿನವನ್ನು ಅತಂತ್ಯ ಸಂಭ್ರದಿಂದ ಆಚರಣೆ ಮಾಡಬೇಕು. ಆದರೆ ತಾಲೂಕ ಆಡಳಿತವು ಕಾಟಾಚಾರಕ್ಕೆ ಎಂಬಂತೆ ಆಚರಣೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಈ ಆಗದಂತೆ ನೋಡಿಕೊಳ್ಳಬೇಕು ಎಂದು ಸಹಾಯಕ ಆಯುಕ್ತ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ಸಮಿತಿ ಅಧ್ಯಕ್ಷರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಎಂಎಲ್‌ಸಿ ಶರಣಗೌಡ ಪಾಟೀಲ್ ಬಯ್ಯಾಪುರ, ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟಿ, ತಹಸೀಲ್ದಾರ ಎನ್.ಶಂಶಾಲಂ, ಅಧಿಕಾರಿಗಳು ಹಾಗೂ ಅನೇಕ ಮುಖಂಡರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ