ಕಲ್ಯಾಣ ಕರ್ನಾಟಕ ಉತ್ಸವ: ಸಚಿವ ದರ್ಶನಾಪುರ ಧ್ವಜಾರೋಹಣ

KannadaprabhaNewsNetwork |  
Published : Sep 18, 2024, 01:48 AM IST
ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ನೆರವೇರಿಸಿದರು.  | Kannada Prabha

ಸಾರಾಂಶ

Kalyan Karnataka Utsav: Minister Darshanpur flag hoisting

- ಯಾದಗಿರಿಯಲ್ಲಿ ಸರ್ದಾರ್ ವಲ್ಲಭಬಾಯ್‌ ಪಟೇಲರ ಪುತ್ಥಳಿ ಸ್ಥಾಪನೆಗೆ ಯೋಜನೆ

- ರಾಜ್ಯದ ಅಭಿವೃದ್ಧಿಗೆ ಪಂಚ ಗ್ಯಾರಂಟಿ ಜಾರಿ : ದರ್ಶನಾಪುರ

------

ಕನ್ನಡಪ್ರಭ ವಾರ್ತೆ ಯಾದಗಿರಿ

ಕಲ್ಯಾಣ ಕರ್ನಾಟಕ ಉತ್ಸವ ಪ್ರಯುಕ್ತ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ನೆರವೇರಿಸಿದರು. ಈ ವೇಳೆ ವಿವಿಧ ತುಕಡಿಗಳಿಂದ ಗೌರವ ವಂದನೆ ಸಚಿವರು ಸ್ವೀಕರಿಸಿದರು. ಇದಾದ ಬಳಿಕ ಆಕರ್ಷಕ ಪಥ ಸಂಚಲನ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಮಾತನಾಡಿ, ಹೈದ್ರಾಬಾದ್ ಪ್ರಾಂತ್ಯವು ಸ್ವತಂತ್ರವಾಗಿ ಭಾರತದೊಂದಿಗೆ ವಿಲೀನವಾದ ದಿನವನ್ನು ನೆನಪಿಸಿಕೊಳ್ಳಲು ಆಗ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲಾಗುತ್ತಿದ್ದು, ಈಗ ಕಲ್ಯಾಣ ಕರ್ನಾಟಕ ಉತ್ಸವವಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು. 1947 ರ ಆ.15 ರಂದು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಆದರೆ, ಅಂದಿನ ಹೈದ್ರಾಬಾದ್ ಪ್ರಾಂತ್ಯ ವಿಲೀನಕ್ಕೆ ಒಪ್ಪದೇ ಇದ್ದಾಗ ನಿಜಾಮರ ವಿರುದ್ಧ ಆಪರೇಷನ್ ಪೊಲೋ ಮಾಡಿ ನಿಜಾಮರ ಸೈನ್ಯವನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾಯಿತು ಎಂದರು.

ಯಾದಗಿರಿಯಲ್ಲಿ ಸರ್ದಾರ್ ವಲ್ಲಭಬಾಯ್‌ ಪಟೇಲ್ ಮೂರ್ತಿ ಸ್ಥಾಪನೆಗೆ ಈಗಾಗಲೇ ಯೋಜನೆ ರೂಪಿಸಿದ್ದೇವೆ. ನಿಜಾಮರ ಆಳ್ವಿಕೆಯಲ್ಲಿ ಈ ಭಾಗ ಹಿಂದುಳಿದಿವೆ. ಈ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಿದ್ದರಿಂದ ರಾಜ್ಯದ ಇನ್ನಿತರರೊಂದಿಗೆ ಸ್ಪರ್ಧಿಸಲು ಅವಕಾಶವಾಗಿದೆ. ಗುಲಾಮಗಿರಿಯೊಂದಿಗೆ ಇದ್ದೆವು. ರಾಜ್ಯದ ಅಭಿವೃದ್ಧಿಗೆ ಪಂಚ ಗ್ಯಾರಂಟಿ ಜಾರಿ ಮಾಡಲಾಗಿದೆ ಎಂದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ, ಯೂಡಾ ಅಧ್ಯಕ್ಷ ವಿನಾಯಕ ಮಾಲಿ ಪಾಟೀಲ್, ಜಿಲ್ಲಾಧಿಕಾರಿ ಡಾ. ಸುಶೀಲಾ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ, ಅರಣ್ಯ ಸಂರಕ್ಷಣಾ ಅಧಿಕಾರಿ ಕಾಜೋಲ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಇದ್ದರು.

----

17ವೈಡಿಆರ್6: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ನೆರವೇರಿಸಿದರು.

--

17ವೈಡಿಆರ್7: ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

--

17ವೈಡಿಆರ್‌8 : ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳು ಸಾಂಸ್ಕೃತಿಕ ಪ್ರದರ್ಶನ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ