ಕಮಲ್ ಹಾಸನ್ ಚಿತ್ರ ರಾಜ್ಯದಲ್ಲಿಬಿಡುಗಡೆ ಮಾಡಬೇಡಿ: ಮನವಿ

KannadaprabhaNewsNetwork |  
Published : May 29, 2025, 12:11 AM IST
28ಸಿಎಚ್‌ಎನ್‌53ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ನೀಡಿರುವ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಪದಾಧಿಕಾರಿಗಳು ಕೊಳ್ಳೇಗಾಲ ಉಪವಿಭಾಗಾಧಿಕಾರಿ ಮಹೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿ ಅವರ ಚಲನಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು. | Kannada Prabha

ಸಾರಾಂಶ

ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ನೀಡಿರುವ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಪದಾಧಿಕಾರಿಗಳು ಕೊಳ್ಳೇಗಾಲ ಉಪವಿಭಾಗಾಧಿಕಾರಿ ಮಹೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿ ಅವರ ಚಲನಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ಕೊಳ್ಳೇಗಾಲ: ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ನೀಡಿರುವ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಪದಾಧಿಕಾರಿಗಳು ಕೊಳ್ಳೇಗಾಲ ಉಪವಿಭಾಗಾಧಿಕಾರಿ ಮಹೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿ ಅವರ ಚಲನಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ತಾಲೂಕು ಘಟಕದ ಅಧ್ಯಕ್ಷ ಜಗದೀಶ್ ಶಾಸ್ತ್ರಿ, “ಕಮಲ್ ಹಾಸನ್ ಕನ್ನಡ ತಮಿಳಿನಿಂದ ಬಂದಿದೆ ಎಂದು ಹೇಳಿ, ಕನ್ನಡ ಭಾಷೆಗೆ ನಿಂದನೀಯ ಹೇಳಿಕೆ ನೀಡಿದ್ದಾರೆ. ಅವರು ಕನ್ನಡದಲ್ಲಿ ನಟಿಸಿ ಅಭಿಮಾನಿಗಳನ್ನು ಹೊಂದಿದರೂ, ಇಂತಹ ಹೇಳಿಕೆ ನೀಡಿ ಕನ್ನಡಿಗರ ಭಾವನೆಗಳಿಗೆ ಧಕ್ಕೆ ನೀಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವ್ಯಕ್ತಿಗೆ ಕನ್ನಡ ಚಿತ್ರರಂಗದಲ್ಲಿ ಅವಕಾಶ ನೀಡಬಾರದು. ಅತಿಕ್ರಮವಾಗಿ ಅವರ ಚಲನಚಿತ್ರಗಳನ್ನು ಬಿಡುಗಡೆ ಮಾಡುವಂತೆ ಚಿತ್ರಮಂದಿರಗಳು ಮುಂದಾದರೆ, ಕರ್ನಾಟಕ ರಕ್ಷಣಾ ತೀವ್ರ ಹೋರಾಟ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದರು.

ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಉಪಾಧ್ಯಕ್ಷರು ಯೂನುಸ್ ಪಾಷ, ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಮಹೇಶ್, ಹೊಸ ಹಂಪಾಪುರ ಗ್ರಾಮ ಘಟಕ ರೇವಣ್ಣನಾಯಕ, ಉಪಾಧ್ಯಕ್ಷರು ಶ್ರೀಧರ್, ಜಿಲ್ಲಾ ಉಪಾಧ್ಯಕ್ಷರು ಸಮೀಷರೀಪ್, ಜಿಲ್ಲಾ ಸಲಹೆಗಾರರು ಅಣಗಳ್ಳಿ ಬಸವರಾಜು, ಪದಾಧಿಕಾರಿಗಳು ಸುರೇಶ್ ಸಿಂಗನಲ್ಲೂರು, ರೇಚಣ್ಣ, ಮಹಮ್ಮದ್ ಅಬ್ಜಲ್(ಅಜ್ಜು), ಹಾಗೂ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌
ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು