ಶಿವಮೊಗ್ಗ: ನಟ ಕಮಲ್‌ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಕರ್ನಾಟಕ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ಶಿವಪ್ಪನಾಯಕ ವೃತ್ತದಲ್ಲಿ ಕಮಲಾಹಾಸನ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ: ನಟ ಕಮಲ್‌ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಕರ್ನಾಟಕ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ಶಿವಪ್ಪನಾಯಕ ವೃತ್ತದಲ್ಲಿ ಕಮಲಾಹಾಸನ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ವೇದಿಕೆಯ ಅಧ್ಯಕ್ಷ ವಾಟಾಳ್ ಮಂಜುನಾಥ್, ಕಮಲ್ ಹಾಸನ್ ಚಿತ್ರಕ್ಕೆ ಕನ್ನಡಿಗರು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಚನ್ನೈನಲ್ಲಿ ನಡೆದ ಕನ್ನಡದ ನಟ ಶಿವರಾಜ್‌ಕುಮಾರ್‌ರವರ ಅಭಿನಯದ ತಮಿಳು ಚಿತ್ರದ ಪ್ರಮೋಷನ್ ಸಮಾರಂಭವೊಂದರಲ್ಲಿ ನಟ ಕಮಲ್‌ಹಾಸನ್ ಕನ್ನಡ ಭಾಷೆಯ ಬಗ್ಗೆ ನಿಕೃಷ್ಟವಾಗಿ ಮಾತನಾಡಿ, ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದ್ದು ಎಂದಿದ್ದಾರೆ. 2500 ಸಾವಿರ ವರ್ಷ ಹಳೆಯ ಭಾಷೆ ಕನ್ನಡವಾಗಿದ್ದು, ಅರಿವಿಲ್ಲದೆ ಮಾತನಾಡಿದ್ದಾರೆ. ಇದರಿಂದ ಕನ್ನಡಿಗರಿಗೆ ಅವಮಾನವಾಗಿದೆ. ಕೂಡಲೇ ಅವರು ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಮುಂದೆ ಅವರ ಯಾವ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಮತ್ತು ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಅರ್ಚನಾ, ದೀಪ, ರವಿಕುಮಾರ್, ಲೋಕೇಶ್, ಸಂತೋಷ್, ಗಿರೀಶ್ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.