ಕನ್ನಡಪ್ರಭ ವಾರ್ತೆ ಮಂಗಳೂರು
ಈ ವೇಳೆ ಮಾತನಾಡಿದ ಶಾಸಕರು, ಪಾಲಿಕೆ ವ್ಯಾಪ್ತಿಯಲ್ಲಿ ವಿಪರೀತ ಮಳೆ ಸುರಿದಿದ್ದರೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಪ್ಪಿಲ್ಲ. ಇನ್ನೊಂದೆಡೆ ರಾಜಕಾಲುವೆಗಳಲ್ಲಿ ಸಮರ್ಪಕವಾಗಿ ಹೂಳೆತ್ತದಿರುವಿಕೆಯಿಂದ ಮನೆಗಳಿಗೆ ಮಳೆ ನೀರು ನುಗ್ಗಿ ಜನಸಾಮಾನ್ಯರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ. ಸಾಲದ್ದಕ್ಕೆ ಮಳೆಯಿಂದ ತೊಂದರೆಗೀಡಾದವರಿಗೆ ಪಾಲಿಕೆ ವತಿಯಿಂದ ಯಾವುದೇ ನೆರವು ಸಿಗುತ್ತಿಲ್ಲ. ಕಸ ವಿಲೇವಾರಿಯ ಅವ್ಯವಸ್ಥೆಯ ಬಗ್ಗೆಯೂ ಜನರಿಂದ ದೂರುಗಳು ಬರುತ್ತಿವೆ. ಬಲ್ಲಾಳ್ ಬಾಗ್ ಬಳಿಯ ಶಿಥಿಲಗೊಂಡಿರುವ ರಾಜಕಾಲುವೆಯ ಸೇತುವೆಯಿಂದ ನೀರು ಸಾರಾಗವಾಗಿ ಹರಿಯದೇ ಅದರಿಂದಲೂ ಕೃತಕ ನೆರೆ ಸೃಷ್ಟಿಯಾಗುತ್ತಿದ್ದುದೆ. ಪಾಲಿಕೆ ಅಧಿಕಾರಿಗಳು ಯಾವುದನ್ನೂ ಹಗುರವಾಗಿ ಪರಿಗಣಿಸದೇ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಶಾಸಕರು ಕಟ್ಟುನಿಟ್ಟಿನ ಸೂಚನೆ ನೀಡಿದರು.ಈ ಸಂದರ್ಭ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಕಾರ್ಯಪಾಲಕ ಎಂಜಿನಿಯರ್ ನರೇಶ್ ಶೆಣೈ ಇದ್ದರು.