ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ಇಲ್ಲಿನ ಕಡಲಕೆರೆ ನಿಸರ್ಗಧಾಮದಲ್ಲಿ ನಡೆಯುವ ೨೧ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ ಭಾನುವಾರ ಆರಂಭಗೊಂಡಿತು. ಸಂಪ್ರದಾಯದಂತೆ ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದಿಂದ ತಂದ ಗಂಧಪ್ರಸಾದವನ್ನು ಕಂಬಳಕರೆಗೆ ಪ್ರೋಕ್ಷಿಸಿ ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಈಶ್ವರ ಭಟ್ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಒಂಟಿಕಟ್ಟೆ ಅಯ್ಯಪ್ಪ ಮಂದಿರದಿಂದ ಕಂಬಳದ ಕೋಣಗಳನ್ನು ಮೆರವಣಿಗೆಯಲ್ಲಿ ಕಂಬಳ ಕ್ರೀಡಾಂಗಣದವರೆಗೆ ಬರಮಾಡಿಕೊಳ್ಳಲಾಯಿತು. ಚೌಟರ ಅರಮನೆಯ ಕುಲದೀಪ ಎಂ. ಅವರು ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ದೀಪಬೆಳಗಿಸಿ ಉದ್ಘಾಟಿಸಿದರು. ಶಾಸಕ, ಕಂಬಳ ಸಮಿತಿಯ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಬಿ. ಸಭಾವೇದಿಕೆ ಉದ್ಘಾಟಿಸಿದರು. ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಬಾಲಕೃಷ್ಣ ಆಚಾರ್ಯ, ವೆಂಕಟರಮಣ ಮತ್ತು ಹನುಮಂತ ದೇವಸ್ಥಾನದ ಆಡಳಿತ ಮೊಕ್ತೇಸರ ಜಿ. ಉಮೇಶ್ ಪೈ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಕೆಎಂಎಫ್ ಅಧ್ಯಕ್ಷ ಸುಚರಿತ ಶೆಟ್ಟಿ ಕೆ.ಪಿ., ಉದ್ಯಮಿಗಳಾದ ಸುಧೀರ್ ಹೆಗ್ಡೆ, ತಿಮ್ಮಯ್ಯ ಶೆಟ್ಟಿ, ಎಂ.ಸಿ.ಎಸ್. ಬ್ಯಾಂಕ್ ಅಧ್ಯಕ್ಷ ಬಾಹುಬಲಿ ಪ್ರಸಾದ್, ಮೂಡಾದ ಮಾಜಿ ಅಧ್ಯಕ್ಷ ಮೇಘನಾಥ ಶೆಟ್ಟಿ, ಪುರಸಭೆಯ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ಸುನೀಲ್ ಆಳ್ವ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ನಾಗರಾಜ ಪೂಜಾರಿ, ಬಸದಿಗಳ ಮೊಕ್ತೇಸರ ಆನಡ್ಕ ದಿನೇಶ್ ಕುಮಾರ್, ಪಡುಮಾರ್ನಾಡು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದಯಾನಂದ ಪೈ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಉಪಸ್ಥಿತರಿದ್ದರು.ಶಾಸಕ ಉಮಾನಾಥ ಕೋಟ್ಯಾನ್ ಅತಿಥಿಗಳನ್ನು ಗೌರವಿಸಿದರು. ಸಮಿತಿಯ ಕೋಶಾಧಿಕಾರಿ ಭಾಸ್ಕರ್ ಎಸ್. ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ, ಕಾರ್ಯದರ್ಶಿ ರಂಜಿತ್ ಪೂಜಾರಿ ಇದ್ದರು.