ಕಂಪ್ಲಿ ಬಾಲಕಿಯರ ಸರ್ಕಾರಿ ಪಿಯು ಕಾಲೇಜು ಶೇ. 65.29 ಫಲಿತಾಂಶ

KannadaprabhaNewsNetwork |  
Published : Apr 10, 2026, 02:00 AM IST
ವಿದ್ಯಾರ್ಥಿಗಳು  | Kannada Prabha

ಸಾರಾಂಶ

ಕಂಪ್ಲಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಈ ಬಾರಿ ನಡೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ. 65.29 ಫಲಿತಾಂಶ ಸಾಧಿಸಿ ಗಮನ ಸೆಳೆದಿದ್ದಾರೆ.

ಕಂಪ್ಲಿ: ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಈ ಬಾರಿ ನಡೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ. 65.29 ಫಲಿತಾಂಶ ಸಾಧಿಸಿ ಗಮನ ಸೆಳೆದಿದ್ದಾರೆ. ಒಟ್ಟಾರೆ ಪರೀಕ್ಷೆಗೆ ಹಾಜರಾದ 314 ವಿದ್ಯಾರ್ಥಿನಿಯರಲ್ಲಿ 205 ಮಂದಿ ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶವನ್ನು ಪರಿಶೀಲಿಸಿದರೆ, ಕಲಾ ವಿಭಾಗದಲ್ಲಿ ಪರೀಕ್ಷೆಗೆ ಕುಳಿತ 147 ವಿದ್ಯಾರ್ಥಿನಿಯರಲ್ಲಿ 78 ಮಂದಿ ಉತ್ತೀರ್ಣರಾಗಿದ್ದಾರೆ. ಈ ವಿಭಾಗದಲ್ಲಿ ಪವಿತ್ರಾ 564 ಅಂಕಗಳನ್ನು ಪಡೆದು ಅಗ್ರಸ್ಥಾನ ಪಡೆದಿದ್ದಾಳೆ. ವಾಣಿಜ್ಯ ವಿಭಾಗದಲ್ಲಿ 77 ವಿದ್ಯಾರ್ಥಿನಿಯರಲ್ಲಿ 61 ಮಂದಿ ಉತ್ತೀರ್ಣರಾಗಿದ್ದು, ಅನಿತಾ 577 ಅಂಕಗಳನ್ನು ಗಳಿಸಿ ಅತ್ಯುತ್ತಮ ಸಾಧನೆ ತೋರಿದ್ದಾಳೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಕುಳಿತ 90 ವಿದ್ಯಾರ್ಥಿನಿಯರಲ್ಲಿ 66 ಮಂದಿ ಉತ್ತೀರ್ಣರಾಗಿದ್ದಾರೆ. ಐಶ್ವರ್ಯಾ 571 ಅಂಕಗಳನ್ನು ಪಡೆದು ವಿಭಾಗದಲ್ಲಿ ಮುಂಚೂಣಿಯಲ್ಲಿ ಇದ್ದಾಳೆ.

ಒಟ್ಟಾರೆ ಫಲಿತಾಂಶದಲ್ಲಿ 45 ಮಂದಿ ಡಿಸ್ಟಿಂಗ್ಷನ್, 117 ಮಂದಿ ಮೊದಲ ದರ್ಜೆ, 33 ಮಂದಿ ದ್ವಿತೀಯ ದರ್ಜೆ ಹಾಗೂ 10 ಮಂದಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುವುದು ವಿಶೇಷವಾಗಿದೆ.

ಇನ್ನು ಎಮ್ಮಿಗನೂರು ಸರ್ಕಾರಿ ಪಿಯು ಕಾಲೇಜು ಕೂಡ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ. 52.38ರಷ್ಟು ಫಲಿತಾಂಶ ಸಾಧಿಸಿದೆ. ಪರೀಕ್ಷೆಗೆ ಹಾಜರಾದ 63 ವಿದ್ಯಾರ್ಥಿಗಳಲ್ಲಿ 33 ಮಂದಿ ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ 49 ವಿದ್ಯಾರ್ಥಿಗಳಲ್ಲಿ 24 ಮಂದಿ ಉತ್ತೀರ್ಣರಾಗಿದ್ದು, ಬಿ. ನೀಲಾವತಿ 579 ಅಂಕಗಳನ್ನು ಪಡೆದು ಅಗ್ರಸ್ಥಾನ ಪಡೆದಿದ್ದಾಳೆ. ಎಚ್.ಪಿ. ನಕ್ಷತ್ರಾ 558 ಅಂಕಗಳನ್ನು ಗಳಿಸಿ ಉತ್ತಮ ಸಾಧನೆ ತೋರಿದ್ದಾಳೆ.

ವಾಣಿಜ್ಯ ವಿಭಾಗದಲ್ಲಿ 14 ವಿದ್ಯಾರ್ಥಿಗಳಲ್ಲಿ 9 ಮಂದಿ ಉತ್ತೀರ್ಣರಾಗಿದ್ದಾರೆ. ಈ ವಿಭಾಗದಲ್ಲಿ ಭುವನೇಶ್ವರಿ 471 ಅಂಕಗಳನ್ನು ಹಾಗೂ ತೇಜಕುಮಾರ್ 437 ಅಂಕಗಳನ್ನು ಪಡೆದು ಗಮನ ಸೆಳೆದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಡಪದ ಅಪ್ಪಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹ
ಸಮತೋಲಿತ ಆಹಾರದಿಂದ ಉತ್ತಮ ಆರೋಗ್ಯ