ಧಾರವಾಡ:
ನಗರದ ಆಲೂರ ವೆಂಕಟರಾವ್ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ದಾಸಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಕೇವಲ ಜಯಕಾರ ಹಾಕುವುದರಿಂದ ಕನಕದಾಸರ ಜಯಂತಿ ಆಚರಣೆ ಪೂರ್ಣವಾಗುವುದಿಲ್ಲ. ಅವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದರು.
ಕನಕದಾಸರು ನಳಚರಿತ್ರೆ, ರಾಮಧಾನ್ಯ ಚರಿತ್ರೆ ಹಾಗೂ ಮೋಹನ ತರಂಗಿಣಿ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ. ಅದರಲ್ಲೂ ರಾಮಧಾನ್ಯ ಚರಿತ್ರೆಯಲ್ಲಿ ರಾಗಿ ಮತ್ತು ಭತ್ತದ ನಡುವಿನ ಸಂವಾದದ ಮೂಲಕ ಸಮಾಜದಲ್ಲಿನ ಜಾತಿ ವ್ಯವಸ್ಥೆ ಮತ್ತು ಅಸಮಾನತೆಯನ್ನು ವಿಶಿಷ್ಟವಾಗಿ ಪ್ರತಿಬಿಂಬಿಸಿದ್ದಾರೆ. ರಾಗಿಯನ್ನು ಕೆಳ ಸಮುದಾಯದ ಸಂಕೇತವಾಗಿ ಹಾಗೂ ಭತ್ತವನ್ನು ಮೇಲ್ವರ್ಗದ ಸಂಕೇತವಾಗಿ ಚಿತ್ರಿಸಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶ ನೀಡಿದ್ದಾರೆ ಎಂದು ವಿವರಿಸಿದರು.ಸಾರ್ವಜನಿಕ ಆಡಳಿತದಲ್ಲಿ ಅಧಿಕಾರಿಗಳು ಹಾಗೂ ಸಮಾಜದ ಪ್ರತಿಯೊಬ್ಬರೂ ಯಾವುದೇ ಮಗುವಿನಲ್ಲಿಯೂ ತಾರತಮ್ಯ ಮಾಡದೆ, ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಬೇಕು. ಕಷ್ಟದಲ್ಲಿರುವವರ ಬದುಕಿಗೆ ನೆರವಾದಾಗ ಮಾತ್ರ ಜಯಂತಿ ಆಚರಣೆ ನಿಜವಾದ ಅರ್ಥದಲ್ಲಿ ಸಾರ್ಥಕವಾಗುತ್ತದೆ ಎಂದು ಹೇಳಿದರು.
ಕರ್ನಾಟಕ ಕುರುಬ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಿಂಗಪ್ಪ ಸವನೂರ ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಡಿಸಿಪಿ ಶೃತಿ ಎನ್.ಎಸ್., ಮುಖಂಡರಾದ ಯಲ್ಲಮ್ಮ ನಾಯ್ಕರ, ಡಾ. ಲೋಹಿತ್ ಡಿ. ನಾಯ್ಕರ, ಹಾಲುಮತ ಮಹಾಸಭಾ ಜಿಲ್ಲಾ ಅಧ್ಯಕ್ಷ ರ‍್ಯಾವಪ್ಪ ಐರಾಣಿ ಮತ್ತಿತರರು ಉಪಸ್ಥಿತರಿದ್ದರು.
ಗೀತಾ ಸಿ.ಡಿ., ಅಪರ ಜಿಲ್ಲಾಧಿಕಾರಿ