ಚಳ್ಳಕೆರೆ: ಪ್ರತಿ ವರ್ಷದಂತೆ ಈ ವರ್ಷವೂ ಭಕ್ತ ಕನಕ ದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ತಾಲ್ಲೂಕು ಕುರುಬ ಸಮಾಜ ನಿರ್ಧರಿಸಿದ್ದು, ಕನಕ ಜಯಂತಿ ಕಾರ್ಯಕ್ರಮಕ್ಕೆ ತಾಲೂಕಿನಾದ್ಯಂತ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾಜ ಹಾಗೂ ಸಂಘಟನೆಗೆ ಶಕ್ತಿ ತುಂಬಬೇಕೆಂದು ರೇವಣಸಿದ್ದೇಶ್ವರ ವಿದ್ಯಾವರ್ಧಕ ಸಂಘದ ತಾಲೂಕು ಅಧ್ಯಕ್ಷ ಆರ್.ಮಲ್ಲೇಶಪ್ಪ ತಿಳಿಸಿದರು.
ತಾಲೂಕು ಹಾಲುಮತ ಮಹಾಸಭಾದ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಎಂ.ಜೆ.ರಾಘವೇಂದ್ರ ಮಾತನಾಡಿ, ನ.೧೮ರ ಸೋಮವಾರ ಬೆಳಗ್ಗೆ ೯ ಗಂಟೆಗೆ ಕನಕ ವೃತ್ತದಿಂದ ಮೆರವಣಿಗೆ ನಡೆಯಲಿದ್ದು, ವಾಲ್ಮೀಕಿ, ಅಂಬೇಡ್ಕರ್, ನೆಹರೂ ವೃತ್ತದ ಮೂಲಕ ಕುರುಬರ ಹಾಸ್ಟಲ್‌ಗೆ ಆಗಮಿಸಲಿದೆ. ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಮುದಾಯದ ಎಲ್ಲಾ ಮುಖಂಡರು ಜಯಂತಿ ಯಶಸ್ವಿಗೆ ಕೈಜೋಡಿಸುವಂತೆ ವಿನಂತಿಸಿದರು.
ವಿಶೇಷವಾಗಿ ಈ ಬಾರಿ ಕನಕ ಜಯಂತಿಯಂದು ಸಮಾಜದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಐವರು ಗಣ್ಯರು, ಸಮುದಾಯದ ಐವರು ಸಾಧಕರು ಹಾಗೂ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು, ಉಣ್ಣೆ ಕಂಬಳಿ ಮಾರುಕಟ್ಟೆ ಮಾಜಿ ಅಧ್ಯಕ್ಷ ಸೂರನಹಳ್ಳಿ ಜಗದೀಶ್, ನಿವೃತ್ತ ಪ್ರಾಂಶುಪಾಲ ಪ್ರೊ.ಸಿ.ಶಿವಲಿಂಗಪ್ಪ, ಯುವ ಘಟಕದ ಅಧ್ಯಕ್ಷ ಭೀಮಣ್ಣ, ಚೌಳೂರು ಬಸವರಾಜು ಇದ್ದರು.