ಜ.5ರಂದು ದಾವಣಗೆರೆಯಲ್ಲಿ ಕನಕ ಜಯಂತಿ, ಪುತ್ಥಳಿ ಅನಾವರಣ

KannadaprabhaNewsNetwork | Published : Dec 30, 2024 1:01 AM

ಸಾರಾಂಶ

ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಜ.5ರಂದು ದಾಸಶ್ರೇಷ್ಠ ಕನಕದಾಸರ 537ನೇ ಜಯಂತ್ಯುತ್ಸವ ಮತ್ತು ಕನಕದಾಸರ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭಕ್ಕೆ ಆಗಮಿಸಲಿದ್ದಾರೆ ಎಂದು ಹರಿಹರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ನಂದಿಗಾವಿ ಎನ್.ಎಚ್. ಶ್ರೀನಿವಾಸ್ ಹರಿಹರದಲ್ಲಿ ಹೇಳಿದ್ದಾರೆ.

- ಸಿಎಂ, ಮಠಾಧೀಶರು, ಸಚಿವರು ಭಾಗಿ: ಶ್ರೀನಿವಾಸ್‌ - - - ಹರಿಹರ: ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಜ.5ರಂದು ದಾಸಶ್ರೇಷ್ಠ ಕನಕದಾಸರ 537ನೇ ಜಯಂತ್ಯುತ್ಸವ ಮತ್ತು ಕನಕದಾಸರ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭಕ್ಕೆ ಆಗಮಿಸಲಿದ್ದಾರೆ ಎಂದು ಹರಿಹರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ನಂದಿಗಾವಿ ಎನ್.ಎಚ್. ಶ್ರೀನಿವಾಸ್ ಹೇಳಿದರು.

ನಗರದಲ್ಲಿ ಭಾನುವಾರ ಕಾರ್ಯಕ್ರಮದ ಪ್ರಚಾರ ಪರಿಕರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜಿಲ್ಲಾ ಕುರುಬ ಸಮಾಜ ಹಾಗೂ ಸಿದ್ದರಾಮಯ್ಯನವರ ಅಭಿಮಾನಿ ಬಳಗದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ವಿವಿಧ ಮಠಾಧೀಶರು, ಸಚಿವರು, ಶಾಸಕರು, ಮುಖಂಡರು ಆಗಮಿಸಲಿದ್ದಾರೆ ಎಂದರು.

ಕಾರ್ಯಕ್ರಮ ನಿಮಿತ್ತ ಮೆರವಣಿಗೆಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಚಾಲನೆ ನೀಡುವರು. ಕಾಗಿನೆಲೆ ಕನಕ ಗುರುಪೀಠ ಮಹಾ ಸಂಸ್ಥಾನದ ನಿರಂಜನಾನಂದಪುರಿ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು. ಸಿಎಂ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕನಕದಾಸರ ಪುತ್ಥಳಿ ಅನಾವರಣಗೊಳಿಸುವರು. ಪಾಲಿಕೆ ಸದಸ್ಯ ಜೆ.ಎನ್ ಶ್ರಿನಿವಾಸ್ ಅಧ್ಯಕ್ಷತೆ ವಹಿಸುವರು ಎಂದರು.

ಗೃಹಮಂತ್ರಿ ಡಾ. ಜಿ.ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ ಮಹಾದೇವಪ್ಪ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ವಸತಿ ಮತ್ತು ವಕ್ಪ್ ಅಲ್ಪಸಂಖ್ಯಾತರ ಸಚಿವ ಬಿ.ಝಡ್ ಜಮೀರ್‌ ಅಹಮ್ಮದ್‌ ಖಾನ್, ಕಾರ್ಮಿಕ ಸಚಿವ ಸಂತೋಷ ಲಾಡ್, ಪಾಲಿಕೆಯ ಮಹಾಪೌರ ಚಮನಸಾಬ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಲೋಕಸಭಾ ಮಾಜಿ ಸದಸ್ಯ ಜಿ.ಎಂ. ಸಿದ್ದೇಶ್ವರ, ಗ್ಯಾರಂಟಿ ಯೋಜನೆಗಳ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ, ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ, ಹರಿಹರ ಶಾಸಕ ಬಿ.ಪಿ ಹರೀಶ್ ಆಗಮಿಸುವರು ಎಂದು ವಿವರಿಸಿದರು.

ಮಾಜಿ ಶಾಸಕ ಎಸ್.ರಾಮಪ್ಪ ಮಾತನಾಡಿ, ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ, ಮುಖಂಡರಿಗೆ ಸನ್ಮಾನಿಸಲಾಗುವುದು. ತಾಲೂಕಿನ ಸರ್ವ ಸಮಾಜ ಬಾಂಧವರು ಪಾಲ್ಗೊಳ್ಳಬೇಕು. ಹರಿಹರ ಕ್ಷೇತ್ರಕ್ಕೆ ದಾವಣಗೆರೆ ಸಮೀಪ ಇದೆ. ಆದ್ದರಿಂದ ವಾಹನಗಳ ವ್ಯವಸ್ಥೆ ಮಾಡಿಲ್ಲ ಎಂದರು.

ಪಾಲಿಕೆ ಸದಸ್ಯ ಜೆ.ಎನ್. ಶ್ರೀನಿವಾಸ್, ಕೆಪಿಸಿಸಿ ಸದಸ್ಯ ರೇವಣಸಿದ್ದಪ್ಪ, ನ್ಯಾಯವಾದಿ ರಾಜನಹಳ್ಳಿ ನಾಗೇಂದ್ರಪ್ಪ, ತಾಲೂಕು ಕುರುಬ ಸಮಾಜದ ಅಧ್ಯಕ್ಷ ಹಾಲೇಶಪ್ಪ, ಪೂಜಾರ ಪರಮೇಶ್ವರಪ್ಪ, ಸಿ.ಎನ್. ಹುಲಿಗೇಶ್, ಎಳೆಹೊಳೆ ರುದ್ರಪ್ಪ, ಕುಣೇಬೆಳಕೆರಿ ರುದ್ರಪ್ಪ ಇತರರು ಇದ್ದರು.

- - - -29ಎಚ್.ಆರ್.ಆರ್1: ದಾವಣಗೆರೆಯಲ್ಲಿ ನಡೆಯಲಿರುವ ಕನಕದಾಸರ 537ನೇ ಜಯಂತ್ಯುತ್ಸವ ಮತ್ತು ಕನಕದಾಸರ ಪುತ್ಥಳಿ ಅನಾವರಣ ಕಾರ್ಯಕ್ರಮದ ಪ್ರಚಾರ ಪರಿಕರಗಳನ್ನು ಹರಿಹರದಲ್ಲಿ ಬಿಡುಗಡೆಗೊಳಿಸಲಾಯಿತು.

Share this article