21ರಂದು ಕನಕ ಪ್ರತಿಭಾ ಪುರಸ್ಕಾರ

KannadaprabhaNewsNetwork |  
Published : Jul 21, 2024, 01:18 AM IST
ಪಟ್ಟಣದ ಕೊಬ್ಬರಿ ಪೇಟೆಯ ಸಂಘದ ಕಚೇರಿಯಲ್ಲಿ ಕನಕ ನೌಕರರ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಮಹಾಂತೇಶ್  ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಸಾನ್ನಿಧ್ಯವಹಿಸುವರು. ರಾಜ್ಯ ಆಹಾರ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಜಿ.ಗೋವಿಂದಪ್ಪ ಕಾರ್ಯಕ್ರಮ ಉದ್ಘಾಟಿಸುವರು

ಕನ್ನಡಪ್ರಭ ವಾರ್ತೆ ಹೊಸದುರ್ಗ

ಕನಕ ನೌಕರರ ಸಾಂಸ್ಕೃತಿಕ ಸಂಘದಿಂದ 25ನೇ ವರ್ಷದ ಕನಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಭಾನುವಾರ ಶಿವಗಂಗಾ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮಹಾಂತೇಶ್ ಹೇಳಿದರು.

ಕೊಬ್ಬರಿ ಪೇಟೆ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಸಾನ್ನಿಧ್ಯವಹಿಸುವರು. ರಾಜ್ಯ ಆಹಾರ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಜಿ.ಗೋವಿಂದಪ್ಪ ಕಾರ್ಯಕ್ರಮ ಉದ್ಘಾಟಿಸುವರು. ತಾಲೂಕು ಕನಕ ನೌಕರರ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಕೆ.ವಿ.ಮಹಾಂತೇಶ್ ಅಧ್ಯಕ್ಷತೆ ವಹಿಸುವರು.

ರಾಜ್ಯ ಕ್ಷ ಕಿರಣ ವಿಕಿರಣ ಸುರಕ್ಷತಾ ನಿರ್ದೇಶನಾಲಯದ ನಿರ್ದೇಶಕ ಡಾ.ಎನ್ ರವಿ, ಬೆಂಗಳೂರಿನ ಮಧುಮೇಹ ಕೇಂದ್ರದ ನಿರ್ದೇಶಕ ಡಾ.ಪರಮೇಶ್, ಕಾಳಿದಾಸ ಆರೋಗ್ಯ ಶಿಕ್ಷಣ ಹಾಗೂ ಅಹಿಲ್ಯ ಟ್ರಸ್ಟ್‌ನ ಅಧ್ಯಕ್ಷೆ ಡಾ.ವಿಜಯಲಕ್ಷ್ಮೀ, ರಾಜ್ಯ ನೋಂದಣಿ ಹಾಗೂ ಮುದ್ರಾಂಕ ಕಂದಾಯ ಇಲಾಖೆ ಅಧಿಕಾರಿಗಳಾದ ಜೆ.ವಿ.ಯಶೋಧರಾ. ಕನಕ ನೌಕರರ ಸಾಂಸ್ಕೃತಿಕ ಸಂಘದ ಸಂಸ್ಥಾಪಕ ಅಧ್ಯಕ್ಷ ಆಂಜಿನಪ್ಪ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ತಾ.ಕುರುಬ ಸಮಾಜದ ಮುಖಂಡರಾದ ಡಾ.ಹನುಮಂತಪ್ಪ, ಕಾರೇಹಳ್ಳಿ ಜಯಣ್ಣ, ಅಧ್ಯಕ್ಷರಾದ ನಾಗೇನಹಳ್ಳಿ ಮಂಜುನಾಥ, ಕಾರೇಹಳ್ಳಿ ಬಸವರಾಜ್, ಆಗ್ರೋ ಶಿವಣ್ಣ, ಎಂ.ಎಚ್.ಕೃಷ್ಣಮೂರ್ತಿ, ಅರುಣ್ ಗೋವಿಂದಪ್ಪ, ಎಂ.ಆರ್.ಸಿ ಮೂರ್ತಿ, ಎಚ್.ಟಿ.ವೆಂಕಟೇಶ, ತಾ. ಅಧಿಕಾರಿಗಳಾದ ಡಾ.ಈಶ, ಡಾ.ರಾಘವೇಂದ್ರ, ಕಂಗುವಳ್ಳಿ ಮಂಜುನಾಥ, ಸುನಿಲ್ ಕುಮಾರ, ಸುರೇಶ್ ಜತ್ತಿ, ಕನಕ ನೌಕರರ ಸಾಂಸ್ಕೃತಿಕ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ತಾಲೂಕು ಕುರುಬ ಸಮಾಜದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ಸಂಘದ ಬೆಳವಣಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ ಚಾಚಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಕನಕ ನೌಕರರ ಸಾಂಸ್ಕೃತಿಕ ಸಂಘದ ಗೌರವಾಧ್ಯಕ್ಷ ಬಿ.ಆರ್.ಶಾಂತಮೂರ್ತಿ, ಮಾರ್ಗದರ್ಶಕರಾದ ಎಂಆರ್ ಸಿ ಮೂರ್ತಿ, ಪ್ರಧಾನ ಕಾರ್ಯದರ್ಶಿ ಶಿವಮೂರ್ತಿ, ಹಿರಿಯ ಉಪಾಧ್ಯಕ್ಷ ಗಂಗಾಧರಸ್ವಾಮಿ, ಮಾಜಿ ಅಧ್ಯಕ್ಷ ಶಶಿಧರ್, ಪುಟ್ಟರಾಜು, ಉಮೇಶ್, ಗುರುಮೂರ್ತಿ, ಮಲ್ಲಿಕಾರ್ಜುನ ಇದ್ದರು.

PREV

Recommended Stories

ಜಿಎಸ್ಟಿ ಸ್ಲ್ಯಾಬ್‌ ಕಡಿತದಿಂದ 2.5 ಲಕ್ಷ ಕೋಟಿ ರು. ನಷ್ಟ
ಯುದ್ಧಪೀಡಿತ ಉಕ್ರೇನಿಯರಿಗೆ ಆರ್ಟ್ ಆಫ್ ಲಿವಿಂಗ್ ಆಸರೆ