ಕರ್ನಾಟಕ ಸಂಗೀತಕ್ಕೆ ಕನಕರ ಕೊಡುಗೆ ಅನನ್ಯ

KannadaprabhaNewsNetwork |  
Published : Nov 09, 2025, 01:15 AM IST
ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನಕದಾಸರ ಜಯಂತಿ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಕನಕದಾಸರು ಕನ್ನಡ ಸಾಹಿತ್ಯ ಮತ್ತು ಕರ್ನಾಟಕ ಸಂಗೀತಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ. ಭಕ್ತಿ ಮತ್ತು ಸಾಮಾಜಿಕ ಜಾಗೃತಿ ಮೂಡಿಸುವ ಮೂಲಕ ಕನಕದಾಸರು ದಾರ್ಶನಿಕ ಚಿಂತಕರು ಆಗಿದ್ದಾರೆ ಎಂದು ಕನ್ನಡ ಜಾಗೃತಿ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ ತಿಳಿಸಿದರು.

ದೊಡ್ಡಬಳ್ಳಾಪುರ: ಕನಕದಾಸರು ಕನ್ನಡ ಸಾಹಿತ್ಯ ಮತ್ತು ಕರ್ನಾಟಕ ಸಂಗೀತಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ. ಭಕ್ತಿ ಮತ್ತು ಸಾಮಾಜಿಕ ಜಾಗೃತಿ ಮೂಡಿಸುವ ಮೂಲಕ ಕನಕದಾಸರು ದಾರ್ಶನಿಕ ಚಿಂತಕರು ಆಗಿದ್ದಾರೆ ಎಂದು ಕನ್ನಡ ಜಾಗೃತಿ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ ತಿಳಿಸಿದರು.ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದ ಆವರಣದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಾಮಾಜಿಕ ಸಮಾನತೆ ಮತ್ತು ಸೌಹಾರ್ದತೆಗೆ ಒತ್ತು ನೀಡುವ ಕನಕದಾಸರ ತತ್ವ ಸಿದ್ಧಾಂತಗಳು ಪ್ರತಿಯೊಬ್ಬರಿಗೂ ಆದರ್ಶವಾಗಬೇಕು. ಕನಕದಾಸರ ಕೀರ್ತನೆಗಳಲ್ಲಿ ಅಡಗಿರುವ ಸಾಮಾಜಿಕ ಸಂದೇಶಗಳನ್ನು ಅರಿತುಕೊಂಡು ಬಾಳಿದರೆ ಅದು ಸಮಾಜದ ಏಳಿಗೆಗೆ ಸಹಕಾರಿ ಆಗುತ್ತದೆ ಎಂದರು.

ನವೋದಯ ವಿದ್ಯಾಲಯದ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ ಮಾತನಾಡಿ, ಭಕ್ತಿಯೆ ಹರಿದಾಸ ಸಾಹಿತ್ಯದ ಪ್ರಮುಖ ಶಕ್ತಿ. ಕನಕದಾಸರು ಕರ್ನಾಟಕದ ಭಕ್ತಿ ಆಂದೋಲನದ ಪ್ರಮುಖ ಹರಿದಾಸರು. ಕನ್ನಡ ಭಾಷೆಯಲ್ಲಿ ಕೀರ್ತನೆಗಳನ್ನು ಸರಳವಾದ ಭಾಷೆಯ ಮೂಲಕ ಜನಸಾಮಾನ್ಯರಿಗೆ ತಲುಪಿಸಿದರು. ಜನಸಾಮಾನ್ಯರ ಭಾಷೆಯಲ್ಲಿ ಸಾಹಿತ್ಯ ರಚಿಸಿದ ಶಿವಶರಣರು ಮತ್ತು ಹರಿದಾಸರುಗಳಿಗೆ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ ಎಂದರು.

ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ದಾರ್ಶನಿಕರನ್ನು ಮತ್ತು ಸಾಧಕರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು. ಕನಕದಾಸರು ಮಾನವೀಯ ಮೌಲ್ಯಗಳ ಸಂದೇಶವನ್ನು ಸಾರಿದವರು. ಕನಕದಾಸರು ಜಾತಿ, ಕುಲ, ಮತಗಳ ಭೇದಗಳನ್ನು ವಿರೋಧಿಸಿದರು. ಮಾನವೀಯತೆ ಮೌಲ್ಯಗಳಿಗೆ ಒತ್ತು ನೀಡಿದ್ದಾರೆ ಎಂದು ಹೇಳಿದರು‌.

ತಾಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಪದಾಧಿಕಾರಿಗಳಾದ ಸಾ.ಲ.ಕಮಲನಾಥ್, ಆರ್.ಗೋವಿಂದರಾಜು, ದಾದಾಪೀರ್, ಜಿ.ಸುರೇಶ್, ವಿ.ಎಸ್.ಹೆಗಡೆ, ಕುಮಾರ್ ಡಿ.ಶ್ರೀಕಾಂತ್, ಸಿ.ಅಣ್ಣಯ್ಯ, ನಾಗರಾಜ್, ವೆಂಕಟೇಶರೆಡ್ಡಿ, ಅಂಜನಮೂರ್ತಿ, ಕೋದಂಡರಾಮ್, ರಂಗಸ್ವಾಮಿ, ಸಫೀರ್, ನಾಗರತ್ನಮ್ಮ, ಮಲ್ಲೇಶ್, ಮಹಾದೇವಪ್ಪ, ರಂಗಸ್ವಾಮಯ್ಯ ಭಾಗವಹಿಸಿದ್ದರು.

8ಕೆಡಿಬಿಪಿ4-

ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನಕದಾಸರ ಜಯಂತಿ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ