ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು
ತಾಲೂಕಿನ ರಾಂಪುರ ಪತ್ತಿ ಬಸಪ್ಪ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಕನಕದಾಸ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದಾಸ ಪರಂಪರೆಯಲ್ಲಿ ಕನಕದಾಸರು ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದಾರೆ. ಸರಳ ಮತ್ತು ಸಹಜ ಬದುಕು ಬಾಳಿದ ಅವರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದರು. ಅಸಮಾನತೆಯ ವಿರುದ್ಧ ಆಗಿನ ಕಾಲ ಘಟ್ಟದಲ್ಲಿ ಬಹುದೊಡ್ಡ ಕ್ರಾಂತಿಯನ್ನೇ ಮಾಡಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಬಾಳುವಂತೆ ತಿಳಿಸಿದರು.ಪಟ್ಟಣದಲ್ಲಿ ಕನಕ ಭವನ ನಿರ್ಮಾಣಕ್ಕೆ ಈಗಾಗಲೇ ಎರಡು ಎಕರೆ ಜಮೀನು ಗುರುತಿಸಿ ಸರ್ಕಾರಕ್ಕೆ ಕಳಿಸಲಾಗಿದೆ. ಸರ್ಕಾರ ಮಟ್ಟದಲ್ಲಿ ಈಗಾಗಲೇ ಚರ್ಚಿಸಲಾಗಿದೆ. ಬರುವ ದಿನಗಳಲ್ಲಿ ತಾಲೂಕು ಕೇಂದ್ರ ಸ್ಥಾನದಲ್ಲಿ ಸುಸಜ್ಜಿತ ಕನಕ ಭವನ ನಿರ್ಮಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಇದೇ ಸಂದರ್ಭದಲ್ಲಿ ಭರವಸೆ ವ್ಯಕ್ತ ಪಡಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಮಾತನಾಡಿ ಕನಕ ದಾಸರು ಒಂದು ವರ್ಗಕ್ಕೆ ಸೀಮಿತರಾಗಿಲ್ಲ.ಮನು ಕುಲದ ಒಳತಿಗಾಗಿ ಬಿಟ್ಟು ಹೋಗಿರುವ ಅವರ ಆದರ್ಶದಂತೆ ಪ್ರತಿಯೊಬ್ಬರು ಸಾಗಬೇಕು.ಕೀರ್ತನರಾರರಾಗಿ, ತತ್ತ್ವ ಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ನಾಡಿನ ಸಾಂಸ್ಕೃತಿಕ ಪರಂಪರೆಗೆ ಅನನ್ಯ ಕೊಡುಗೆ ನೀಡಿರುವ ಕನಕದಾಸರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬಾಳುವಂತೆ ಹೇಳಿದರು.
ಬಹು ನಿರೀಕ್ಷಿತ ಜನಗಣತಿ ವರದಿ ಬಿಡುಗಡೆಯಾದಲ್ಲಿ ರಾಜ್ಯದ ಎಲ್ಲಾ ಹಿಂದುಳಿದ ಸಮುದಾಯಗಳು ಜನಸಂಖ್ಯೆ ಆದಾರದಲ್ಲಿ ನಂಬರ್ 1ನೇ ಸ್ಥಾನಕ್ಕೆ ಬರಲಿವೆ ಎನ್ನುವ ಆತಂಕದಿಂದ ಕೆಲವರು ಜನಗಣತಿ ವರದಿ ಬಿಡುಗಡೆಗೆ ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ಅಂತವರಿಗೆ ಮುಂದಿನ ಚುನಾವಣೆಯಲ್ಲಿ ಮತ ನೀಡಬಾರದು ಎಂದು ಹೊಸದುರ್ಗ ಕನಕ ಗುರು ಪೀಠದ ಈಶ್ವರನಂದ ಪುರಿ ಸ್ವಾಮೀಜಿ ಕರೆ ನೀಡಿದ್ದಾರೆ.
ಜನಗಣತಿ ವರದಿ ಬಹಿರಂಗಗೊಂಡರೆ ಹಿಂದುಳಿದ ಸಮುದಾಯಗಳು ಜನಸಂಖ್ಯೆ ಆದಾರದಲ್ಲಿ ನಂಬರ್ ಒನ್ ಸ್ಥಾನಕ್ಕೆ ಬರಲಿವೆ. ಅಲ್ಲದೆ ಅಭಿವೃದ್ಧಿಯಾಗಲಿವೆ ಎನ್ನುವ ಆತಂಕ ಕೆಲವರಲ್ಲಿದೆ. ಎಲ್ಲಾ ವರ್ಗದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಯ ಸಂಪೂರ್ಣ ಮಾಹಿತಿ ಇರುವ ಜನಗಣತಿ ವರದಿ ಮಂಡಿಸದಂತೆ ಕೆಲ ಶಾಸಕರು ಮುಖ್ಯಮಂತ್ರಿಗಳಿಗೆ ಒತ್ತಡ ತಂದಿದ್ದಾರೆ. ಹಿಂದುಳಿದ ಆಯೋಗದ ವರದಿ ಮಂಡನೆಗೆ ವಿರೋಧ ವ್ಯಕ್ತ ಪಡಿಸುತ್ತಿರುವ ಶಾಸಕರಿಗೆ ಮುಂದಿನ ಚುನಾವಣೆಯಲ್ಲಿ ಮತ ನೀಡದಂತೆ ಕರೆ ನೀಡಿದರು.