ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ ಕನಕದಾಸರು-ಶಾಸಕ ಶಿವಣ್ಣನವರ

KannadaprabhaNewsNetwork |  
Published : Nov 09, 2025, 02:45 AM IST
8ಎಚ್‌ವಿಆರ್4- | Kannada Prabha

ಸಾರಾಂಶ

ಕನಕದಾಸರು ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ಹೋಗಲಾಡಿಸಲು ಶ್ರಮಿಸಿ, ಸಮಾಜದಲ್ಲಿನ ಮೂಢನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ, ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕರು ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಬ್ಯಾಡಗಿ: ಕನಕದಾಸರು ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ಹೋಗಲಾಡಿಸಲು ಶ್ರಮಿಸಿ, ಸಮಾಜದಲ್ಲಿನ ಮೂಢನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ, ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕರು ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.ತಾಲೂಕಿನ ಕಾಗಿನೆಲೆಯ ಕನಕ ಗುರುಪೀಠದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಕ್ತ ಶ್ರೇಷ್ಠ್ಠ ಶ್ರೀ ಕನಕದಾಸರ ಜಯಂತ್ಯುತ್ಸವ- 2025 ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.ಕನಕದಾಸರು 15-16ನೇ ಶತಮಾನದಲ್ಲಿ ಜನಪ್ರಿಯವಾಗಿದ್ದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಅವರದೇ ಆದ ಕಾಣಿಕೆ ನೀಡಿದ್ದಾರೆ. ಕನಕದಾಸರ ಜೀವನದ ಚರಿತ್ರೆಯನ್ನು ನೋಡುವುದಾದರೆ ಅವರು ಕುರುಬ ಸಮಾಜದಲ್ಲಿ ಹುಟ್ಟಿ ದಾಸ ಸಾಹಿತ್ಯಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದಾರೆ. ಕನಕದಾಸರು ಮೂಲತಃ ದಂಡನಾಯಕರಾಗಿದ್ದರು. ಯುದ್ಧವೊಂದರಲ್ಲಿ ವೈರಾಗ್ಯ ಉಂಟಾಗಿ ಹರಿಭಕ್ತರಾದರು. ಇವರ ಜೀವನ ತತ್ವಗಳು ಇಂದಿನ ಪೀಳಿಗೆಗೆ ಮಾದರಿಯಾಗಿವೆ ಎಂದರು.ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಕನಕದಾಸರು ಯಾವುದೇ ಜಾತಿ, ಮತಕ್ಕೆ ಸೀಮಿತರಾದವರಲ್ಲ. ಎಲ್ಲ ಸಮುದಾಯದವರ ಒಳಿತನ್ನು ಬಯಸಿದವರು. ಅವರ ತತ್ವ ಹಾಗೂ ವಿಚಾರಧಾರೆಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಕೊಳ್ಳಬೇಕು. ಮುಂದಿನ ವರ್ಷದಿಂದ ಎರಡು ಅಥವಾ ಮೂರು ದಿನಗಳ ಕಾಲ ಕನಕ ಉತ್ಸವ ಆಚರಿಸಲಾಗುವುದು ಎಂದು ಹೇಳಿದರು.ಕಾರ್ಯಕ್ರಮದಲ್ಲಿ 2024-25ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.ಕಾರ್ಯಕ್ರಮದಲ್ಲಿ ಕಾಗಿನೆಲೆ ಮಹಾಸಂಸ್ಥಾನದ ಧರ್ಮದರ್ಶಿ, ಆಡಳಿತಾಧಿಕಾರಿ ಹಾಗೂ ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌ಎಫ್‌ಎನ್ ಗಾಜಿಗೌಡ್ರ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಮಾಜಿ ಸಚಿವ ಆರ್.ಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೊಡಿ, ಅಪರ ಜಿಲ್ಲಾಧಿಕಾರಿ ಹಾಗೂ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಡಾ.ನಾಗರಾಜ. ಎಲ್, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪುನೀತ, ಹಾವೇರಿ ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬಳೆ, ತಹಸೀಲ್ದಾರ ಶರಣಮ್ಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಇತರರು ಇದ್ದರು. ದಾರ್ಶನಿಕರನ್ನು ಜಾತಿಗೆ ಸೀಮಿತ ಮಾಡಬೇಡಿ: ಇಂದಿನ ದಿನಗಳಲ್ಲಿ ದಾರ್ಶನಿಕರ ಜಯಂತಿ ಜಾತಿಗೆ ಸೀಮಿತವಾಗಿರುವುದು ದುರ್ದೈವ. ಬಸವಣ್ಣರ ಮತ್ತು ಕನಕದಾಸರ ತತ್ವ ಜಾತ್ಯತೀತವಾಗಿದೆ. ಕನಕದಾಸರು ಕೇವಲ ಕುರುಬರಿಗೆ ಸೀಮಿತವಲ್ಲ. ಬಸವಣ್ಣನವರು ಲಿಂಗಾಯತರಿಗೆ ಸೀಮಿತವಲ್ಲ. ಡಾ.ಬಿ.ಆರ್. ಅಂಬೇಡ್ಕರ್ ದಲಿತರಿಗೆ ಸೀಮಿತವಲ್ಲ. ಇವರೆಲ್ಲ ನಮ್ಮ ದೇಶದ ಅನರ್ಘ್ಯ ರತ್ನಗಳು. ದಾರ್ಶನಿಕ ಜಯಂತಿ ನಡೆದರೆ ಆ ಜಾತಿಯ ನಾಯಕರನ್ನು ಕರೆದು ಸಭೆಯನ್ನು ಮಾಡಬೇಡಿ. ಆ ಜಾತಿಯ ನಾಯಕರನ್ನ ಹೊರತು ಪಡಿಸಿ ಸಭೆಯನ್ನು ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.

PREV

Recommended Stories

ವಂದೇ ಮಾತರಂ ಭಾರತ ಮಾತೆಯ ಪ್ರೇರಣಾ ಶಕ್ತಿ: ಸಂಸದ ಗದ್ದಿಗೌಡರ
10, 11, ರಂದು ರಾಜ್ಯ ಟ್ರ್ಯಾಕ್‌ ಸೈಕ್ಲಿಂಗ್‌ ತಂಡಗಳ ಆಯ್ಕೆ