ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಕನಕದಾಸ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ ಆಶ್ರಯದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಕಾಸರಗೋಡು ಜಿಲ್ಲಾ ಮಟ್ಟದ ಕನಕ ಚಿಂತನೆ ಪ್ರಸಾರ ಮಾಲಿಕೆ – ಕನಕಾಭಿಯಾನ ಕಾರ್ಯಕ್ರಮ ಮಂಜೇಶ್ವರ ತಾಲೂಕು ಧರ್ಮತ್ತಡ್ಕದ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ನೇರೋಳು ಸುಬ್ಬಣ್ಣ ಭಟ್ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಶಾಲಾ ಪ್ರಬಂಧಕ ಶಂಕರನಾರಾಯಣ ಭಟ್ ಉದ್ಘಾಟಿಸಿ, ಕನಕದಾಸರ ಆದರ್ಶಗಳು ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ದಾರಿದೀಪವಾಗಿದ್ದು, ಅವರ ವಿಚಾರಧಾರೆಗಳನ್ನು ಯುವಜನತೆಗೆ ತಲುಪಿಸುವ ಇಂತಹ ಕಾರ್ಯಕ್ರಮಗಳು ಅತ್ಯಂತ ಮಹತ್ವದ್ದಾಗಿವೆ ಎಂದು ಅಭಿಪ್ರಾಯಪಟ್ಟರು.
ಆಶಯ ನುಡಿಗಳನ್ನಾಡಿದರು. ಶಾಲೆಯ ಮುಖ್ಯೋಪಾಧ್ಯಾಯ ಶಶಿಕುಮಾರ್ ಪಿ. ಹಾಗೂ ಕಾಸರಗೋಡು ಜಿಲ್ಲಾ ಕನಕಾಭಿಯಾನದ ಸಂಯೋಜಕಿ ರಾಜಶ್ರೀ ಟಿ. ರೈ, ಪೆರ್ಲ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧನಾರ್ಥಿ ಸಾಯಿಸುಮಾ ನಾವಡ ಕಾರಿಂಜ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಕನಕದಾಸರ ಜೀವನ ಮತ್ತು ಸಾಹಿತ್ಯ ವಿಷಯದ ಕುರಿತು ಉಪನ್ಯಾಸ ನೀಡಿದರು. ಬಳಿಕ ವಿದ್ಯಾರ್ಥಿಗಳಿಗಾಗಿ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕನಕದಾಸರ ಸಾಹಿತ್ಯ ಮತ್ತು ಚಿಂತನೆಗಳ ಕುರಿತು ತಮ್ಮ ಜ್ಞಾನ ವಿಸ್ತರಿಸಿಕೊಂಡರು.ಶಿಕ್ಷಕಿ ಶ್ವೇತಾಕುಮಾರಿ ಎಂ. ಸ್ವಾಗತಿಸಿದರು. ಅಧ್ಯಾಪಕಿ ನಿವೇದಿತಾ ವಂದಿಸಿದರು. ಶಿಕ್ಷಕ ಸುಜಿತ್ ಕುಮಾರ್ ನಿರೂಪಿಸಿದರು.